ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಬಿ.ಇಡಿ ವಿಭಾಗದ ೩ನೇ ಅಂತಸ್ತಿನ ಕಟ್ಟಡ ನಿರ್ಮಾಣ ಮತ್ತು ನವೀಕರಣ ಕಾರ್ಯಕ್ಕೆ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಭದ್ರಾವತಿ, ಮಾ. ೧೫: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಬಿ.ಇಡಿ ವಿಭಾಗದ ೩ನೇ ಅಂತಸ್ತಿನ ಕಟ್ಟಡ ನಿರ್ಮಾಣ ಮತ್ತು ನವೀಕರಣ ಕಾರ್ಯಕ್ಕೆ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.
ವಿದ್ಯಾಸಂಸ್ಥೆಯ ಮಹಾ ಪೋಷಕರಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷ ಸಿ.ಎಸ್ ಷಡಾಕ್ಷರಿಯವರ ಸಹಕಾರದೊಂದಿಗೆ ಮಾರು ೧ ಕೋಟಿ ರು. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮತ್ತು ನವೀಕರಣ ಕಾರ್ಯ ಕೈಗೊಳ್ಳಲಾಗುತ್ತಿದೆ.
ವಿದ್ಯಾಸಂಸ್ಥೆಯ ಪದನಿಮಿತ್ತ ಅಧ್ಯಕ್ಷ ಬಿ. ಸಿದ್ದಬಸಪ್ಪ, ಸಂಸ್ಥಾಪಕರಾದ ಬಿ.ಎಲ್. ರಂಗಸ್ವಾಮಿ ಮತ್ತು ಡಾ. ಜಿ. ಎಂ. ನಟರಾಜ್, ಪ್ರಧಾನ ಕಾರ್ಯದರ್ಶಿ ಡಿ.ಎಸ್ ರಾಜಪ್ಪ, ಖಜಾಂಚಿ ಎಸ್.ಕೆ ಮೋಹನ್, ಪ್ರೌಢ ಶಾಲಾ ವಿಭಾಗದ ಕಾರ್ಯದರ್ಶಿ ಪುಟ್ಟಲಿಂಗ ಮೂರ್ತಿ, ತಾಂತ್ರಿಕ ಸಲಹೆಗಾರರಾದ ಡಾ. ಮಂಜುನಾಥ್ ಮತ್ತು ಎಂ.ಎಸ್.ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು ಮತ್ತು ಶಿಕ್ಷಕ ವೃಂದದವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment