ಭದ್ರಾವತಿ ತಾಲೂಕು ಬಗರ್ ಹುಕ್ಕುಂ ಸಮಿತಿ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ೧೭ ಮಂದಿ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲಾಯಿತು.
ಭದ್ರಾವತಿ, ಮಾ. ೧೫: ತಾಲೂಕು ಬಗರ್ ಹುಕ್ಕುಂ ಸಮಿತಿ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ೧೭ ಮಂದಿ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲಾಯಿತು.
ತಾಲೂಕಿನಲ್ಲಿ ಬಗರ್ ಹುಕ್ಕುಂ ಸಾಗುವಳಿದಾರರನ್ನು ಗುರುತಿಸಿ ಅವರಿಗೆ ತ್ವರಿತಗತಿಯಲ್ಲಿ ಹಕ್ಕುಪತ್ರದ ಜೊತೆಗೆ ಪಹಣಿ ಹಾಗು ಮ್ಯುಟೇಷನ್ ಸಹ ನೀಡುವಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಮುಂದಿನ ೧೫ ದಿನಗಳಲ್ಲಿ ಇನ್ನೂ ೨೫ ಮಂದಿ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಸಿದ್ದತೆ ಕೈಗೊಂಡಿದೆ. ಸಮಿತಿಗೆ ತಾಲೂಕು ಆಡಳಿತದಿಂದ ಅದರಲ್ಲೂ ತಹಸೀಲ್ದಾರ್‌ರವರು ಇನ್ನೂ ಹೆಚ್ಚಿನ ಸಹಕಾರ ನೀಡಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಕ್ಷಮತೆಯೊಂದಿಗೆ ತಾಲೂಕಿನಲ್ಲಿರುವ ಎಲ್ಲಾ ಬಗರ್ ಹುಕ್ಕುಂ ಸಾಗುವಳಿದಾರರನ್ನು ಗುರುತಿಸುವ ಕಾರ್ಯ ಕೈಗೊಳ್ಳಲಿದೆ ಎಂದು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷ, ಅಂತರಗಂಗೆ ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ್ ಪತ್ರಿಕೆಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್, ಸಮಿತಿ ಸದಸ್ಯರಾದ ಕರೀಗೌಡ, ಮಾಲಾನಾಯ್ಕ್ ಮತ್ತು ಸರಸ್ವತಿ ಹಾಗು ತಾಲೂಕು ಕಛೇರಿ ಸಿಬ್ಬಂದಿಗಳು ಮತ್ತು ಬಗರ್ ಹುಕ್ಕುಂ ಸಾಗುವಳಿದಾರರು ಉಪಸ್ಥಿತರಿದ್ದರು.
No comments:
Post a Comment