ಎಚ್. ರೇವಣ್ಣ
ಭದ್ರಾವತಿ, ಮಾ. ೨೮: ನಗರಸಭೆ ನಿವೃತ್ತ ಆರೋಗ್ಯ ನಿರೀಕ್ಷಕ, ಕೇಶವಪುರ ಬಡಾವಣೆ ನಿವಾಸಿ ಎಚ್. ರೇವಣ್ಣ(೬೩) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ಪತ್ನಿ, ಇಬ್ಬರು ಗಂಡು, ಓರ್ವ ಹೆಣ್ಣು ಮಕ್ಕಳನ್ನು ಹೊಂದಿದ್ದರು. ರೇವಣ್ಣನವರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದು ಮಾದರಿಯಾಗಿದ್ದಾರೆ. ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಹಾಗು ಸಿಬ್ಬಂದಿ ವರ್ಗದವರು ಮತ್ತು ಪೌರಕಾರ್ಮಿಕರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment