ಭದ್ರಾವತಿ, ಮಾ. ೨೪: ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾ.೨೫ರಂದು ಸಂಜೆ ೪ ಗಂಟೆಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್ ಉದ್ಘಾಟಿಸಲಿದ್ದು, ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಶೋಭ ಗಂಗರಾಜ್ ಮತ್ತು ಖಜಾಂಚಿ ಜಯಂತಿ ನಾಗರಾಜ್‌ಶೇಟ್, ಶಾಶ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ರೂಪರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಮಾಜದ ಹಿರಿಯ ಸದಸ್ಯರಾದ ಭಾಗ್ಯವತಿ ನಿಜಗುಣ, ರೇಣುಕ ಚಂದ್ರಶೇಖರಯ್ಯ ಮತ್ತು ಪುಷ್ಪ ಸುಬ್ರಮಣ್ಯರವರಿಗೆ ಗೌರವ ಸಮರ್ಪಣೆ ನಡೆಯಲಿದೆ.
No comments:
Post a Comment