ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಮಹಿಳಾ ಸರ್ಕಾರಿ ನೌಕರರಿಗೆ ವಿವಿಧ ಬಗೆಯ ಕ್ರೀಡಾ ಸ್ಪರ್ಧೆಗಳು ಜರುಗಿದವು. ಬಿ. ಸಿದ್ದಬಸಪ್ಪ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ ನೀಡಿದರು.
ಭದ್ರಾವತಿ, ಮಾ. ೨೦: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಮಹಿಳಾ ಸರ್ಕಾರಿ ನೌಕರರಿಗೆ ವಿವಿಧ ಬಗೆಯ ಕ್ರೀಡಾ ಸ್ಪರ್ಧೆಗಳು ಜರುಗಿದವು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಕ್ರೀಡಾಸ್ಪರ್ಧೆಗಳಿಗೆ ಚಾಲನೆ ನೀಡಿದರು. ಮಹಿಳಾ ಸರ್ಕಾರಿ ನೌಕರರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಸಂಭ್ರಮಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ವಿದ್ಯಾಸಂಸ್ಥೆ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಡಿ.ಎಸ್ ರಾಜಪ್ಪ, ಖಜಾಂಚಿ ಎಸ್.ಕೆ ಮೋಹನ್, ಕ್ರೀಡಾ ಕಾರ್ಯದರ್ಶಿಗಳಾದ ಶ್ರೀಕಾಂತ್ ಮತ್ತು ಜಾನ್‌ಪಾಲ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ರಾಜ್‌ಕುಮಾರ್, ಲೋಹಿತ್, ಪ್ರಭುರವರು, ಮಲ್ಲಿಕಾರ್ಜುನ್ ಎಂ.ಸಿ ಆನಂದ್, ರೇವತಿ, ರವಿ, ಕರಣ್‌ಸಿಂಗ್, ಅಂತೋಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment