ಭದ್ರಾವತಿ, ಮಾ. ೧೮: ಇಲ್ಲಿಗೆ ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಂಗುಣಿ-ಉತ್ತಿರ ತೀರ್ಥ ಕಾವಡಿ ಜಾತ್ರಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ಶ್ರೀ ಕ್ಷೇತ್ರದ ಶ್ರೀ ಮುರುಗೇಶ್ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ, ಹೊರ ರಾಜ್ಯಗಳಿಂದ ಭಕ್ತಾಧಿಗಳು ಆಗಮಿಸಿದ್ದರು. ಕಾವಡಿ ಹರಕೆ ಹೊತ್ತ ಭಕ್ತಾಧಿಗಳು ಗಮನ ಸೆಳೆದರು. ಮಧ್ಯಾಹ್ನ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಸ್ಥಾನ ಸಮಿತಿಯ ಪ್ರಮುಖರು, ಸೇವಾಕರ್ತರು ಜಾತ್ರಾ ಮಹೋತ್ಸವದ ಯಶಸ್ವಿಗೆ ಸಹಕರಿಸಿದರು.
No comments:
Post a Comment