ಭದ್ರಾವತಿ ತಾಲೂಕು ಕಚೇರಿ ರಸ್ತೆ ನಿರ್ಮಲ ಆಸ್ಪತ್ರೆ ಬಳಿ ಕನಕ ಆಟೋ ನಿಲ್ದಾಣದ ವತಿಯಿಂದ ಗುರುವಾರ ಪುನೀತ್‌ರಾಜ್‌ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.
ಭದ್ರಾವತಿ, ಮಾ. ೧೭: ತಾಲೂಕು ಕಚೇರಿ ರಸ್ತೆ ನಿರ್ಮಲ ಆಸ್ಪತ್ರೆ ಬಳಿ ಕನಕ ಆಟೋ ನಿಲ್ದಾಣದ ವತಿಯಿಂದ ಗುರುವಾರ ಪುನೀತ್‌ರಾಜ್‌ಕುಮಾರ್ ಹುಟ್ಟುಹಬ್ಬ ವಿಜೃಂಭಣೆಯಿಂದ ಆಚರಿಸಲಾಯಿತು.
೩ ಅಡಿ ಎತ್ತರದ ಸಿಮೆಂಟ್‌ನಿಂದ ತಯಾರಿಸಲಾದ ಪುನೀತ್‌ರಾಜ್‌ಕುಮಾರ್‌ರವರ ಪತ್ರಿಮೆಯನ್ನು ಯುವ ಮುಖಂಡ ಬಿ.ಎಸ್ ಬಸವೇಶ್ ಅನಾವರಣಗೊಳಿಸಿದರು. ಅಭಿಮಾನಿಗಳು, ಆಟೋ ಚಾಲಕರು, ಸ್ಥಳೀಯರು ಸ್ವರ ಸಂಗೀತ ಕಾರ್ಯಕ್ರಮದೊಂದಿಗೆ ಸಂಭ್ರಮಿಸಿದರು.
ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಆಟೋ ಚಾಲಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment