೪೧ ಯೂನಿಟ್ ರಕ್ತ ಸಂಗ್ರಹ, ೩೦೦ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ
ಭದ್ರಾವತಿ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨, ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ರಕ್ತನಿಧಿ ವಿಭಾಗ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ರಕ್ತದಾನ, ಉಚಿತ ರಕ್ತ ಗುಂಪು ತಪಾಸಣೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಉದ್ಘಾಟಿಸಿದರು.
ಭದ್ರಾವತಿ, ಮಾ. ೨೮: ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨, ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ರಕ್ತನಿಧಿ ವಿಭಾಗ ಸಹಯೋಗದೊಂದಿಗೆ ಸೋಮವಾರ ರಕ್ತದಾನ, ಉಚಿತ ರಕ್ತ ಗುಂಪು ತಪಾಸಣೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ ಉಮಾಶಂಕರ್ ಶಿಬಿರ ಉದ್ಘಾಟಿಸಿದರು. ಪ್ರಾಧ್ಯಾಪಕರಾದ ಡಾ. ಟಿ. ಮಂಜುನಾಥ್, ಡಾ. ಎಸ್. ಧನಂಜಯ, ಎನ್‌ಸಿಸಿ ಸಂಚಾಲಕ ಡಾ. ಸಕ್ರಿನಾಯ್ಕ್, ಯುವ ರೆಡ್ ಕ್ರಾಸ್ ಘಟಕದ ಸಂಚಾಲಕ ಪ್ರೊ. ಆರ್. ವೆಂಕಟೇಶ್, ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ರ ಕಾರ್ಯಕ್ರಮಾಧಿಕಾರಿ ಡಾ. ಆರ್. ಸೀಮಾ, ಘಟಕ-೨ರ ಕಾರ್ಯಕ್ರಮಮಾಧಿಕಾರಿ ಪ್ರೊ. ಬಿ. ಗುರುಪ್ರಸಾದ್, ರೋವರ್‍ಸ್ ಲೀಡರ್ ಪ್ರೊ. ಎಸ್. ವರದರಾಜು, ಸುಬ್ಬಯ್ಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವೈದ್ಯರಾದ ಡಾ. ವಿನೂತ, ಡಾ. ಸುಮಾ, ಡಾ. ನಳಿನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು ೪೧ ಯೂನಿಟ್ ರಕ್ತ ಸಂಗ್ರಹಿಸಲಾಗಿದ್ದು, ಸುಮಾರು ೩೦೦ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆಯ ಸದುಪಯೋಗ ಪಡೆದುಕೊಂಡರು.
No comments:
Post a Comment