ಭದ್ರಾವತಿ, ಮಾ. ೧೮: ನಗರದ ಅಂಬೇಡ್ಕರ್ ವೃತ್ತದ ಬಿ.ಎಚ್ ರಸ್ತೆ ೧ನೇ ತಿರುವಿನಿಂದ ಭದ್ರಾ ನದಿಗೆ ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿ ಹಾಗು ಕಾಮಗಾರಿ ಬದಲಾಯಿಸಿರುವ ಕ್ರಮ ಖಂಡಿಸಿ ಮಾ.೨೧ರಂದು ಪ್ರಜಾ ರಾಜ್ಯ ದಲಿತ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬಿ.ಎಚ್ ರಸ್ತೆ ೧ನೇ ತಿರುವಿನಿಂದ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವಸ್ಥಾನದವರೆಗೂ ದಲಿತರು ಹೆಚ್ಚಾಗಿ ವಾಸಿಸುತ್ತಿದ್ದು, ಮಳೆಗಾಲದಲ್ಲಿ ಭದ್ರಾ ನದಿಗೆ ಜಲಾಶಯದಿಂದ ನೀರು ಬಿಟ್ಟಾಗ ಮನೆಗಳು ಮುಳುಗಡೆಯಾಗುತ್ತಿವೆ. ಈ ಹಿನ್ನಲೆಯಲ್ಲಿ ತಡೆಗೋಡೆ ನಿರ್ಮಾಣಕ್ಕೆ ೯.೫ ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು, ಆದರೆ ಇದೀಗ ಬದಲಾಯಿಸಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕಾಮಗಾರಿ ಬದಲಾವಣೆಗೆ ಕಾರಣಕರ್ತರಾದವರ ವಿರುದ್ಧ ಕ್ರಮ ಕೈಗೊಂಡು ಬಿ.ಎಚ್ ರಸ್ತೆ ೧ನೇ ತಿರುವಿನಿಂದ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಮಾ.೨೧ರಂದು ಬೆಳಿಗ್ಗೆ ೧೧ ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
No comments:
Post a Comment