ಓರ್ವನ ಸೆರೆ : ೫.೬೦ ಲಕ್ಷ ರು. ನಗದು, ೬.೪೩ ಲಕ್ಷ ರು. ಮೌಲ್ಯದ ಚಿನ್ನಾಭರಣ ವಶ
ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿ ನಗದು, ಚಿನ್ನಾಭರವಣ ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಪೇಪರ್‌ಟೌನ್ ಪೊಲೀಸರು ಯಶಸ್ವಿಯಾಗಿರುವುದು.
ಭದ್ರಾವತಿ, ಮಾ. ೧೦: ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿ ನಗದು, ಚಿನ್ನಾಭರವಣ ವಶಪಡಿಸಿಕೊಳ್ಳುವಲ್ಲಿ ಪೇಪರ್‌ಟೌನ್ ಪೊಲೀಸರು ಯಶಸ್ವಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.
ರಬ್ಬರ್‌ಕಾಡು ನಿವಾಸಿ ಎಸ್. ಚೇತನ್(೨೭) ಎಂಬ ಯುವಕನನ್ನು ಬಂಧಿಸಲಾಗಿದ್ದು, ಈತನಿಂದ ೫.೬೦ ಲಕ್ಷ ರು. ನಗದು, ೬.೪೩ ಲಕ್ಷ ರು. ಮೌಲ್ಯದ ಒಟ್ಟು ೧೩೪.೪೪ ಗ್ರಾಂ. ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜ.೧೩ರಂದು ಬೆಳಗ್ಗೆ ರಬ್ಬರ್‌ಕಾಡು ಗ್ರಾಮದ ನಿವಾಸಿ ಪದ್ಮಾ ಎಂಬುವರ ಮನೆಯ ಬೀಗ ಮುರಿದು ಅಲ್ಮೆರಾ ಬೀರುವಿನಲ್ಲಿ ಮನೆ ಕಟ್ಟುವ ಉದ್ದೇಶದಿಂದ ತಂದಿಡಲಾಗಿದ್ದ ೬ ಲಕ್ಷ ರು. ನಗದು ಹಾಗು ಒಟ್ಟು ೫.೬೬ ಲಕ್ಷ ರು. ಮೌಲ್ಯದ ಬಂಗಾರದ ಆಭರಣಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ನೇತೃತ್ವದ ತಂಡ ಪೊಲೀಸ್ ಉಪಾಧೀಕ್ಷಕ ಉಮೇಶ್ ಈಶ್ವರ್ ನಾಯಕ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಶಿಲ್ಪಾ ನಾಯನೇಗಲಿ, ಸಿಬ್ಬಂದಿಗಳಾದ ಆರ್. ರತ್ನಾಕರ, ಕಾಳಾನಾಯ್ಕ, ಹನುಮಂತ ಆವಟಿ, ಚಿನ್ನನಾಯ್ಕ, ನಾಗರಾಜ, ಮೋಹನ್, ವಿಕ್ರಮ್ ಮತ್ತು ರಾಜಣ್ಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment