ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಆಯೋಜನೆ
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಕಾಯಂ ಹಾಗು ಗುತ್ತಿಗೆ ಮಹಿಳಾ ಕಾರ್ಮಿಕ ಮಹಿಳೆಯರಿಗೆ ಈ ಬಾರಿ ವಿಶೇಷವಾಗಿ ಮೋಜಿನ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.
ಭದ್ರಾವತಿ, ಮಾ ೭: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಕಾಯಂ ಹಾಗು ಗುತ್ತಿಗೆ ಮಹಿಳಾ ಕಾರ್ಮಿಕ ಮಹಿಳೆಯರಿಗೆ ಈ ಬಾರಿ ವಿಶೇಷವಾಗಿ ಮೋಜಿನ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.
ಕಾರ್ಖಾನೆಯ ಎಚ್‌ಆರ್‌ಡಿ ಮತ್ತು ಪಿ.ಆರ್ ಇಲಾಖೆಗಳ ಸಹಕಾರದೊಂದಿಗೆ ೨ ದಿನಗಳ ಕಾಲ ಆಯೋಜಿಸಲಾಗಿದ್ದ ಮೋಜಿನ ಕ್ರೀಡೆಯಲ್ಲಿ ಸುಮಾರು ೫೦ ಕಾಯಂ ಹಾಗು ಗುತ್ತಿಗೆ ಮಹಿಳಾ ಕಾರ್ಮಿಕರು ಪಾಲ್ಗೊಂಡು ಸಂಭ್ರಮಿಸಿದರು.
ಪ್ರತಿ ವರ್ಷ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕಾರ್ಖಾನೆಯಲ್ಲಿ ವಿಶೇವವಾಗಿ ಅಚರಿಸಿಕೊಂಡು ಬರಲಾಗುತ್ತಿದ್ದು, ಮಾ.೮ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಖಾನೆ ಆಡಳಿತ ಮಂಡಳಿ ಸಮಸ್ತ ಮಹಿಳೆಯರಿಗೆ ಶುಭ ಕೋರಿದ್ದು, ಅಲ್ಲದೆ ಕಾರ್ಖಾನೆ ಆಡಳಿತ ಕಛೇರಿಯ ಸಭಾಂಗಣದಲ್ಲಿ ಮಧ್ಯಾಹ್ನ ೨.೩೦ ರಿಂದ ಸಾಂಸ್ಕೃತಿಕ ಹಾಗು ವಿಚಾರ ಸಂಕೀರಣ ಕಾರ್ಯಕ್ರಮ ಆಯೋಜಿಸಲಾಗಿದೆ. ಮಹಿಳೆ ಮತ್ತು ಸಬಲೀಕರಣ ಸೇರಿದಂತೆ ಹಲವು ವಿಚಾರಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾತನಾಡಲಿದ್ದಾರೆ.
No comments:
Post a Comment