ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯದ ನೂತನ ಕುಲಸಚಿವ(ಮೌಲ್ಯಮಾಪನ)ರಾಗಿ ಪ್ರೊ. ಎಸ್.ಕೆ ನವೀನ್ ಕುಮಾರ್ ಮತ್ತು ದೂರಶಿಕ್ಷಣ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ಪ್ರೊ.ಬಿ.ಎಸ್. ಬಿರಾದಾರ ಗುರುವಾರ ಅಧಿಕಾರ ವಹಿಸಿಕೊಂಡರು.
ಭದ್ರಾವತಿ, ಮಾ. ೩: ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯದ ನೂತನ ಕುಲಸಚಿವ(ಮೌಲ್ಯಮಾಪನ)ರಾಗಿ ಪ್ರೊ. ಎಸ್.ಕೆ ನವೀನ್ ಕುಮಾರ್ ಮತ್ತು ದೂರಶಿಕ್ಷಣ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ಪ್ರೊ.ಬಿ.ಎಸ್. ಬಿರಾದಾರ ಗುರುವಾರ ಅಧಿಕಾರ ವಹಿಸಿಕೊಂಡರು.
ಮಂಗಳೂರು ವಿಶ್ವ ವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಅಧ್ಯಯನ ವಿಭಾಗದ ಪ್ರೊ. ಎಸ್.ಕೆ ನವೀನ್‌ಕುಮಾರ್‌ರವರನ್ನು ಕುಲಸಚಿವ(ಮೌಲ್ಯಮಾಪನ)ರಾಗಿ ಬುಧವಾರ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿತ್ತು. ಅಲ್ಲದೆ ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾಗಿ ಮುಂದುವರೆಯುವಂತೆ ಪ್ರೊ. ಬಿ.ಎಸ್. ಬಿರಾದಾರ ಅವರಿಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಈ ಇಬ್ಬರು ಸಹ ಅಧಿಕಾರ ವಹಿಸಿಕೊಂಡರು.
ಕುಲಸಚಿವರಾದ ಜಿ. ಅನುರಾಧ, ಡಾ. ಕೆ. ಆರ್. ಮಂಜುನಾಥ್, ಡಾ. ಬಿ.ಇ. ಕುಮಾರಸ್ವಾಮಿ, ಪರೀಕ್ಷಾಂಗ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment