ಭದ್ರಾವತಿ ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಂಗುಣಿ-ಉತ್ತಿರ ತೀರ್ಥ ಕಾವಡಿ ಜಾತ್ರಾ ಮಹೋತ್ಸವ ಮಾ.೧೮ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಶನಿವಾರ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಯಿತು.
ಭದ್ರಾವತಿ, ಮಾ. ೧೨: ಇಲ್ಲಿಗೆ ಸಮೀಪದ ಎಂ.ಸಿ ಹಳ್ಳಿ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಂಗುಣಿ-ಉತ್ತಿರ ತೀರ್ಥ ಕಾವಡಿ ಜಾತ್ರಾ ಮಹೋತ್ಸವ ಮಾ.೧೮ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಶನಿವಾರ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಯಿತು.
ಶ್ರೀ ಕ್ಷೇತ್ರದ ಶ್ರೀ ಮುರುಗೇಶ್ ಸ್ವಾಮೀಜಿ ನೇತೃತ್ವದಲ್ಲಿ ಹೋಮ-ಹವನ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು. ದ್ವಜಾರೋಹಣದ ನಂತರ ಸಿಹಿ ಹಂಚಲಾಯಿತು.
ಪ್ರಮುಖರಾದ ಎ. ಚಂದ್ರಘೋಷನ್, ಸಂಜಯ್‌ಕುಮಾರ್, ಜೆ. ಮಂಜುನಾಥ್, ಸತ್ಯನಾರಾಯಣ, ಆರ್. ಕರುಣಾಮೂರ್ತಿ, ಕೆ. ಮಂಜುನಾಥ್, ಕುಮಾರ್(ಬಂಕ್), ಅನ್ಬು, ಎ. ವೀರಾಭದ್ರನ್, ಸುಂದರ್‌ಬಾಬು, ಎಂ. ವೇಲು, ಡಾ. ವಿಕ್ರಮ್ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.
No comments:
Post a Comment