Sunday, March 27, 2022

ಭೂಮಿಕಾ ವೇದಿಕೆಯಿಂದ ವಿನೂತನ ಕಾರ್ಯಕ್ರಮ : ಜಾದೂ ಮೂಲಕ ವಿಸ್ಮಯಗೊಳಿಸಿದ ಎಂ.ಡಿ ಕೌಶಿಕ್

ಭದ್ರಾವತಿಯಲ್ಲಿ ಭೂಮಿಕಾ ವೇದಿಕೆ ವತಿಯಿಂದ ತರೀಕೆರೆ ರಸ್ತೆಯಲ್ಲಿರುವ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿನೂತನ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ, ನಿರ್ದೇಶಕ, ಜಾದು ಮಾಂತ್ರಿಕ ಎಂ.ಡಿ ಕೌಶಿಕ್ ವಿಭಿನ್ನ ರೀತಿಯ ಜಾದು ಮೂಲಕ ಎಲ್ಲರನ್ನು ವಿಸ್ಮಯಗೊಳಿಸಿದರು.  
    ಭದ್ರಾವತಿ, ಮಾ. ೨೭: ನಾಡು-ನುಡಿ ಬಿಂಬಿಸುವ ನಗರದ ಭೂಮಿಕಾ ವೇದಿಕೆ ವತಿಯಿಂದ ಭಾನುವಾರ ಜೀವನವೆಂಬ ಮಾಂತ್ರಿಕತೆಯಲ್ಲಿ ಹಾಸ್ಯ/ಅಪಹಾಸ್ಯ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭೂಮಿಕಾ ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಮಾತನಾಡಿ, ಕಳೆದ ೨ ವರ್ಷಗಳಿಂದ ಕೋವಿಡ್-೧೯ರ ಪರಿಣಾಮ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗಲಿಲ್ಲ. ಕಳೆದ ೩-೪ ತಿಂಗಳಿನಿಂದ ವೇದಿಕೆ ವತಿಯಿಂದ ಪುನಃ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಇದೀಗ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
    ಚಲನಚಿತ್ರ ನಟ, ನಿರ್ದೇಶಕ, ಜಾದು ಮಾಂತ್ರಿಕ ಎಂ.ಡಿ ಕೌಶಿಕ್ ವಿಭಿನ್ನ ರೀತಿಯ ಜಾದು ಮೂಲಕ ಎಲ್ಲರನ್ನು ವಿಸ್ಮಯಗೊಳಿಸಿದರು.  ವೇದಿಕೆ ಪ್ರಧಾನ ಕಾರ್ಯದರ್ಶಿ ಅಪರಂಜಿ ಶಿವರಾಜ್ ಉಪಸ್ಥಿತರಿದ್ದರು. ನಾಗರಾಜ್ ಸ್ವಾಗಸಿದರು. ಶಾರದ ಶ್ರೀನಿವಾಸ್ ನಿರೂಪಿಸಿದರು.

No comments:

Post a Comment