ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಭದ್ರಾವತಿಯಲ್ಲಿ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಛೇರಿ ಮುಂಭಾಗ ಮುಷ್ಕರ ನಡೆಸಲಾಯಿತು.
ಭದ್ರಾವತಿ, ಮಾ. ೨೮: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ನಗರದ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಛೇರಿ ಮುಂಭಾಗ ಮುಷ್ಕರ ನಡೆಸಲಾಯಿತು.
ಪ್ರಮುಖರು ಮಾತನಾಡಿ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸುವ ಜೊತೆಗೆ ಜೀವ ವಿಮಾ ನಿಗಮವನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಬೇಕು. ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂಪಡೆಯುವ ಮೂಲಕ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಮುಷ್ಕರದಲ್ಲಿ ಯೇಸುದಾಸ್, ಕೆ.ಜೆ ವಿಕ್ರಾಂತ್, ಬಿ.ಜಿ ಜಯಕುಮಾರ್, ಕೆ. ಮೋಹನ್, ಕೆ.ಟಿ ನಾಗರಾಜ್, ಉಷಾದೇವಿ, ಶಶಿಕಲಾ, ಎಸ್. ಸುಮಾ ಮತ್ತು ಭಾಗ್ಯಲತಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment