ಬಜೆಟ್ ಮಂಡನೆ ಸಭೆಯಲ್ಲಿ ಸದಸ್ಯ ಆರ್. ಶ್ರೇಯಸ್ ಆಗ್ರಹ
ಆರ್. ಶ್ರೇಯಸ್
ಭದ್ರಾವತಿ, ಮಾ. ೧೧: ಹಳೇನಗರದ ಪುರಾಣ ಪ್ರಸಿದ್ದ ೨೨ ಗ್ರಾಮಗಳ ಅದಿದೇವತೆ ಶ್ರೀ ಹಳದಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ನಗರಸಭೆ ವತಿಯಿಂದ ಅನುದಾನ ಬಿಡುಗಡೆಗೊಳಿಸುವಂತೆ ನಗರಸಭಾ ಸದಸ್ಯ ಆರ್. ಶ್ರೇಯಸ್(ಚಿಟ್ಟೆ) ಶುಕ್ರವಾರ ನಡೆದ ಬಜೆಟ್ ಮಂಡನೆ ಸಭೆಯಲ್ಲಿ ಒತ್ತಾಯಿಸಿದರು.
ಶಿವಮೊಗ್ಗ ನಗರದಲ್ಲಿ ಪ್ರತಿ ೨ ವರ್ಷಗಳಿಗೆ ಒಮ್ಮೆ ನಡೆಯುವ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಇದೆ ರೀತಿ ಶ್ರೀ ಹಳದಮ್ಮ ದೇವಿ ಜಾತ್ರ ಮಹೋತ್ಸವಕ್ಕೂ ಅನುದಾನ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು. ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರ ಸದಸ್ಯರು ಸಹ ಧ್ವನಿಗೂಡಿಸಿ ಅನುದಾನ ಬಿಡುಗಡೆಗೊಳಿಸಬೇಕೆಂದರು.
ಇದಕ್ಕೆ ಪೂರಕ ಸ್ಪಂದಿಸಿದ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಮತ್ತು ಪೌರಾಯುಕ್ತ ಕೆ. ಪರಮೇಶ್ ಈ ಸಂಬಂಧ ಶೀಘ್ರದಲ್ಲಿಯೇ ಸಭೆ ನಡೆಸಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
No comments:
Post a Comment