ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಈ ಬಾರಿ ಹಲವು ವಿಶೇಷತೆಗಳೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಭದ್ರಾವತಿ, ಮಾ. ೧೪: ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಈ ಬಾರಿ ಹಲವು ವಿಶೇಷತೆಗಳೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಮಹಾಮಾರಿ ಕೋವಿಡ್-೧೯ ಸಂಘಷ್ಟದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಅಂಗನವಾಡಿ ಹಾಗು ಆಶಾ ಕಾರ್ಯಕರ್ತೆಯರನ್ನು ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಮಹಿಳಾ ಪ್ರತಿನಿಧಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕೂಡ್ಲಿಗೆರೆ ಗ್ರಾಮ ಪಂಚಾಯಿತಿ, ತಾಲೂಕು ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟ ಹಾಗು ಸ್ವಸಹಾಯ ಮಹಿಳಾ ಸಂಘಗಳ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉದ್ಯಮಿ ಬಿ.ಕೆ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಯುವ ಮುಖಂಡ ಬಿ.ಎಸ್ ಗಣೇಶ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಹೇಮಾವತಿ ವಿಶ್ವನಾಥ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ, ನಗರಸಭಾ ಸದಸ್ಯೆ ಅನಿತಾ ಮಲ್ಲೇಶ್, ಗ್ರಾಮದ ಮುಖಂಡರಾದ ಎನ್.ಎಚ್ ಮಹೇಶ್, ದಲಿತ ಮುಖಂಡ ಕೃಷ್ಣಮೂರ್ತಿ, ಮಹೇಶ್‌ಗೌಡ್ರು, ದಾನವಾಡಿ ಗುರುಮೂರ್ತಿ, ತಾಲೂಕು ಸುಗ್ರಾಮ ಚುನಾಯಿತಿ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಅಧ್ಯಕ್ಷೆ ಗೌರಮ್ಮ ಎಸ್. ಮಹಾದೇವ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾದೇವಿ ತಿಪ್ಪೇಶ್, ಉಪಾಧ್ಯಕ್ಷ ಕುಬೇರ್‌ನಾಯ್ಕ್, ಮಾಜಿ ಅಧ್ಯಕ್ಷೆ ಮಲ್ಲಕ್ ವೀರಪ್ಪನ್, ಸದಸ್ಯರಾದ ವಿಶ್ವನಾಥ್, ಜಯಣ್ಣ, ಆರ್.ಎನ್ ರುದ್ರೇಶ್, ನಾಗರಾಜ ಗೌಡ್ರು, ಸ್ವಾಮಿನಾಥನ್, ಭಾಗ್ಯಮ್ಮ, ನೀಲಾಬಾಯಿ, ಪಾರ್ವತಿ ಬಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕೂಡ್ಲಿಗೆರೆ, ದಾನವಾಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು, ಗ್ರಾಮಸ್ಥರು, ಅಂಗನವಾಡಿ ಹಾಗು ಆಶಾ ಕಾರ್ಯಕರ್ತೆರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಗ್ರಾಮದ ಮುಖಂಡ ಎಸ್. ಮಹಾದೇವ ಹಾಗು ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ್‌ರನ್ನು ಸನ್ಮಾನಿಸಿ ಗೌರವಿಸಲಾಯಿತು.
No comments:
Post a Comment