ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಮೊದಲ ಬಾರಿಗೆ ಶ್ರೀ ಕೈವಾರ ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ ೨೯೬ನೇ ಜಯಂತ್ಯೋತ್ಸವ ಆಚರಿಸಲಾಯಿತು.
ಭದ್ರಾವತಿ, ಮಾ. ೨೭: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಾನುವಾರ ಮೊದಲ ಬಾರಿಗೆ ಶ್ರೀ ಕೈವಾರ ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ ೨೯೬ನೇ ಜಯಂತ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿ, ಶ್ರೀ ಯೋಗಿನಾರೇಯಣ ತಾತಯ್ಯನವರ ಸಂದೇಶಗಳು ಇಂದಿನ ಸಮಾಜಕ್ಕೆ ಪ್ರಸ್ತುತವಾಗಿವೆ ಎಂದರು.
ಬಲಿಜ ಸಮಾಜದ ಗೌರವಾಧ್ಯಕ್ಷ ಸುಬ್ರಮಣಿ, ಅಧ್ಯಕ್ಷ ಸಂಜೀವ ಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ ಕುಮಾರಸ್ವಾಮಿ, ವೈ.ಎಸ್ ರಾಮಮೂರ್ತಿ, ಹಿಂದುಳಿದ ವರ್ಗಗಳ ತಾಲೂಕು ಗ್ರಾಮಾಂತರ ಉಪಾಧ್ಯಕ್ಷ ಟಿ.ಡಿ ಶಶಿಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಂಗಾಧರ್, ಸತೀಶ್, ಶಿವಕುಮಾರ್ ಮತ್ತು ತಾಲೂಕು ಕಛೇರಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment