ಭದ್ರಾವತಿ, ಮಾ. ೨೨: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಾ.೨೫ರ ಮಧ್ಯಾಹ್ನ ೩ ಗಂಟೆಗೆ ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದಲ್ಲಿರುವ ಭದ್ರಾ ಪ್ರೌಢಶಾಲೆಯಲ್ಲಿ ಯುಗಾದಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕವಿಗೋಷ್ಠಿ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಮುಖ್ಯೋಪಾಧ್ಯಾಯ ಬಿ.ಎಚ್ ವಿರುಪಾಕ್ಷಪ್ಪ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಕೋಡ್ಲುಯಜ್ಞಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಕಸಾಪ ಹಿರಿಯೂರು ಹೋಬಳಿ ಘಟಕದ ಅಧ್ಯಕ್ಷ ಸಿದ್ದೋಜಿರಾವ್, ಹೊಳೆಹೊನ್ನೂರು ಹೋಬಳಿ ಘಟಕದ ಅಧ್ಯಕ್ಷ ಎಸ್.ಬಿ ಸಿದ್ದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
No comments:
Post a Comment