ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಹುಟ್ಟುಹಬ್ಬದ ಅಂಗವಾಗಿ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಒಳ ರೋಗಿಗಳಿಗೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.
ಭದ್ರಾವತಿ, ಏ. ೧: ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ತುಮಕೂರು ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆದರ್ಶತನಗಳನ್ನು ಮೈಗೂಡಿಸಿಕೊಂಡು ನಾವೆಲ್ಲರೂ ಮುನ್ನಡೆಯಬೇಕಾಗಿದೆ ಎಂದು ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಅವರು ಶುಕ್ರವಾರ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಒಳ ರೋಗಿಗಳಿಗೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಹುಟ್ಟುಹಬ್ಬವನ್ನು ಮಹಾಸಭಾ ವತಿಯಿಂದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಚರಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಮಹಾಸಭಾ ತಾಲೂಕು ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ, ಉಪಾಧ್ಯಕ್ಷ ವಾಗೀಶ್, ಪ್ರಧಾನ ಕಾರ್ಯದರ್ಶಿ ಅರಳಿಹಳ್ಳಿ ರವಿ(ರೇವಪ್ಪ), ಬಾರಂದೂರು ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ರೂಪ ನಾಗರಾಜ್, ಕಾರ್ಯದರ್ಶಿ ಕವಿತಾ ಸುರೇಶ್, ಯುವ ಘಟಕದ ಅಧ್ಯಕ್ಷ ಎಚ್. ಮಂಜುನಾಥ್, ಉಪಾಧ್ಯಕ್ಷ ಮಹಾದೇವ, ಖಜಾಂಚಿ ರಮೇಶ್, ಮಹಾಸಭಾ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ, ರವಿಕುಮಾರ್, ಜಗದೀಶ್ ಪಾಟೀಲ್, ಸಚ್ಚಿದಾನಂದ, ಬಿ.ಎಸ್ ಮಹೇಶ್‌ಕುಮಾರ್, ಕಲ್ಪನಾ, ಲಕ್ಷ್ಮಿಕಾಂತ್, ಕುಮಾರ್ ಹಾಗು ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹಿರಿಯ ನಾಗರೀಕರ ಆರೈಕೆ ಕೇಂದ್ರದಲ್ಲಿ ಹುಟ್ಟುಹಬ್ಬ:
ಉಜ್ಜನಿಪುರ ಆನೇಕೊಪ್ಪ ಎಂಪಿಎಂ ಬಡಾವಣೆಯಲ್ಲಿರುವ ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದಲ್ಲೂ ಮಹಾಸಭಾ ವತಿಯಿಂದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟುಹಬ್ಬ ಆಚರಿಸಲಾಯಿತು.
ಬಿಳಿಕಿ ಶ್ರೀಗಳು ಹಿರಿಯ ನಾಗರೀಕರೊಂದಿಗೆ ಹುಟ್ಟುಹಬ್ಬದ ಸಂಭ್ರಮ ಹಂಚಿಕೊಂಡರು. ಮಹಾಸಭಾ ಪ್ರಮುಖರು, ಹಿರಿಯ ನಾಗರೀಕರ ಆರೈಕೆ ಕೇಂದ್ರದ ಮೇಲ್ವಿಚಾರಕರು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment