ಭದ್ರಾವತಿಯಲ್ಲಿ ಸ್ನೇಹ ಮಿಲನ ಮಹಿಳಾ ಸಂಘದ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಏ. ೨೧: ಮಹಿಳಾ ಸಂಘಗಳು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತಗೊಳ್ಳಬಾರದು ಎಂದು ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ಉಪಾಧ್ಯಕ್ಷ ಮಹಾದೇವ್ ಹೇಳಿದರು.
ಅವರು ನಗರದ ಸ್ನೇಹ ಮಿಲನ ಮಹಿಳಾ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಾಲ ಪಡೆಯುವುದು, ಪಡೆದ ಸಾಲವನ್ನು ತೀರಿಸುವುದು, ಉಳಿತಾಯ ಮಾಡುವುದು ಇಷ್ಟಕ್ಕೆ ಸೀಮಿತವಾಗಬಾರದು. ಮಹಾನ್ ಆದರ್ಶ ವ್ಯಕ್ತಿಗಳ ಜನ್ಮದಿನಾಚರಣೆ, ಸಾಮಾಜಿಕ ಸೇವಾ ಕಾರ್ಯಗಳು ಸೇರಿದಂತೆ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತಮ್ಮ ಬದ್ದತೆಯನ್ನು ಪ್ರದರ್ಶಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಪ್ರಸ್ತುತ ದಿನಗಳಲ್ಲಿ ಒಂದು ಅಥವಾ ಎರಡು ಪದವಿ ಪಡೆಯುವುದೇ ಹೆಚ್ಚು. ಅಂಬೇಡ್ಕರ್‌ರವರು ಅಂದಿನ ಕಾಲದಲ್ಲಿಯೇ ೨೭ ಪದವಿಗಳನ್ನು ಪಡೆಯುವ ಮೂಲಕ ಮಹಾನ್ ಸಾಧನೆಯನ್ನು ಮಾಡಿ ತೋರಿಸಿದ್ದಾರೆ. ಅವರ ಕಠಿಣ ಪರಿಶ್ರಮ ದೇಶದ ಮಹಾನ್ ವ್ಯಕ್ತಿಯನ್ನಾಗಿ ಮಾಡುವಲ್ಲಿ ಸಹಕಾರಿಯಾಯಿತು. ಇವರ ಸ್ಮರಣೆ ಮಾಡುವುದು ಇಂದಿನ ಅಗತ್ಯವಾಗಿದೆ. ಅಂಬೇಡ್ಕರ್ ಹಾಗು ಅಕ್ಕಮಹಾದೇವಿಯವರ ಜೀವನ ಚರಿತ್ರೆ ನಾವೆಲ್ಲರೂ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸಂಘದ ಅಧ್ಯಕ್ಷೆ ಕವಿತಾ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಖಜಾಂಚಿ ಬಿ.ಎಸ್ ರೂಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವತ್ಸಲಾ ರಮೇಶ್ ಸ್ವಾಗತಿಸಿದರು. ರೇಣುಕಾ ಯಶೋಧರ ನಿರೂಪಿಸಿದರು. ಮಂಜುಳಾ ವಂದಿಸಿದರು.
ಕಾರ್ಯಕ್ರಮದಲ್ಲಿ ಯಶೋಧರ, ಮಂಜುಳ. ಬಿ.ಎಸ್.ರೂಪಾ. ಸೇರಿದಂತೆ ಹಲವರಿದ್ದರು.
No comments:
Post a Comment