ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜು ಅಧ್ಯಾಪಕರ ಸಂಘದ ರಾಜ್ಯಾಧ್ಯಕ್ಷ ಡಾ. ಟಿ.ಎಂ. ಮಂಜುನಾಥ್ ನೇತೃತ್ವದ ತಂಡ ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜೆಗೆ ಭೇಟಿ ನೀಡಿ ಕಾಲೇಜಿನ ಅಧ್ಯಾಪಕರೊಂದಿಗೆ ಸಮಾಲೋಚನೆ ನಡೆಸಿತು. ತಂಡದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಕಾಲೇಜು ಆಡಳಿತ ಮಂಡಳಿ ಪರವಾಗಿ ಅಭಿನಂದಿಸಲಾಯಿತು.
ಭದ್ರಾವತಿ, ಏ. ೭: ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಕಾಲೇಜು ಅಧ್ಯಾಪಕರ ಸಂಘದ ರಾಜ್ಯಾಧ್ಯಕ್ಷ ಡಾ. ಟಿ.ಎಂ. ಮಂಜುನಾಥ್ ನೇತೃತ್ವದ ತಂಡ ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜೆಗೆ ಭೇಟಿ ನೀಡಿ ಕಾಲೇಜಿನ ಅಧ್ಯಾಪಕರೊಂದಿಗೆ ಸಮಾಲೋಚನೆ ನಡೆಸಿತು
ಅಧ್ಯಾಪಕರ ವಿವಿಧ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿ, ಅಧ್ಯಾಪಕರು ವಿದ್ಯಾರ್ಥಿ ಸ್ನೇಹಿಯಾಗಿ ಸರ್ಕಾರದ ಎಲ್ಲಾ ಶೈಕ್ಷಣಿಕ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗುವಂತೆ ಹಾಗು ಅಧ್ಯಾಪಕರು ಕಡ್ಡಾಯವಾಗಿ ಸಾಮಾಜಿಕ ಕಳಕಳಿಯ ವಿಷಯ ಕುರಿತು ಸಂಶೋಧನೆ ಕೈಗೊಳ್ಳಲು ಮನವಿ ಮಾಡಲಾಯಿತು.
ತಂಡ ಕಾಲೇಜಿನ ಶೈಕ್ಷಣಿಕ ಪ್ರಗತಿ ಹಾಗು ಪರಿಸರ ಮತ್ತು ಕಲಿಕೆಯ ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿತು.
ಪ್ರಾಂಶುಪಾಲ ಡಾ . ಧನಂಜಯ ಬಿ. ಜಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಡಾ . ನಾರಾಯಣ, ಕೋಶಾಧ್ಯಕ್ಷ ಡಾ. ಶ್ರೀನಾಥ್ ಮತ್ತು ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ತಂಡದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಕಾಲೇಜು ಆಡಳಿತ ಮಂಡಳಿ ಪರವಾಗಿ ಅಭಿನಂದಿಸಲಾಯಿತು.
No comments:
Post a Comment