ಭದ್ರಾವತಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್‌ನಲ್ಲಿ ಗುರುವಾರ ಛಲವಾದಿ ಮಹಾಸಭಾ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂಭ್ರಮಿಸಲಾಯಿತು.
ಭದ್ರಾವತಿ, ಏ. ೧೪ : ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ ಅಂಗವಾಗಿ ವಿವಿಧ ಸಂಘಟನೆಗಳು ಗುರುವಾರ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಂಭ್ರಮಿಸಿದವು.
ದಲಿತಪರ ಸಂಘಟನೆಗಳು ಜೈ ಭೀಮ್ ಘೋಷಣೆಗಳನ್ನು ಹಾಕುವ ಮೂಲಕ ಪಟಾಕಿ ಸಿಡಿಸಿ, ಸಿಹಿ ಹಂಚಿಕೆ ಮಾಡಿದವು. ಸುಮಾರು ೨-೩ ತಾಸುಗಳ ವರೆಗೆ ಅಂಬೇಡ್ಕರ್ ವೃತ್ತದಲ್ಲಿ ಜನಸಂದಣಿ ಕಂಡು ಬಂದಿತು. ಈ ನಡುವೆ ಕೆಲವು ಸಂಘಟನೆಗಳು ನೀಲಿ ಪೇಟ, ಧ್ವಜ ಹಿಡಿದು ಕಲಾತಂಡಗಳೊಂದಿಗೆ ಹೆಜ್ಜೆ ಹಾಕಿದವು.
ಛಲವಾದಿ ಮಹಾಸಭಾ :
ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್ ನೇತೃತ್ವದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಮಹೇಶ್, ಜಯರಾಜ್, ಗೋಪಾಲ್, ಈ.ಪಿ. ಬಸವರಾಜ್, ಅನಿಲ್, ಕೂಡ್ಲಿಗೆರೆ, ರಮೇಶ್, ಕಾಳಿಂಗನಹಳ್ಳಿ ಜಗದೀಶ್, ವಿಶ್ವನಾಥ್, ಎನ್. ಶ್ರೀನಿವಾಸ್, ಪುಟ್ಟರಾಜ್, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್‌ನಲ್ಲಿ ಗುರುವಾರ ಬಹುಜನ ಸಮಾಜವಾದಿ ಪಾರ್ಟಿ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಬಹುಜನ ಸಮಾಜ ಪಾರ್ಟಿ:
ಬಹುಜನ ಸಮಾಜ ಪಾರ್ಟಿ ವತಿಯಿಂದ ತಾಲೂಕು ಅಧ್ಯಕ್ಷ ರಹಮತ್ ಉಲ್ಲಾ ಖಾನ್ ನೇತೃತ್ವದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಸಂಯೋಜಕ ಎಂ. ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಪಿ.ವಿ ನರಸಯ್ಯ, ಗುಲಾಮ್ ಹುಸೇನ್, ಶೌಕತ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಭದ್ರಾವತಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್‌ನಲ್ಲಿ ಗುರುವಾರ ಕ್ರೈಸ್ತ ಸಮಾಜದ ವಿವಿಧ ಸಂಘಟನೆಗಳ ಮುಖಂಡರಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಕ್ರೈಸ್ತ ಸಮಾಜದ ವಿವಿಧ ಸಂಘಟನೆಗಳು:
ಕ್ರೈಸ್ತ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಯುಸಿಎಟಿ ಅಧ್ಯಕ್ಷ ಸೆಲ್ವರಾಜ್, ಕ್ಯಾಥೋಲಿಕ್ ಅಸೋಸಿಯೇಷನ್ ಪ್ರೆಸಿಡೆಂಟ್ ಅಂತೋಣಿ, ಜೆಸಿಡಬ್ಲ್ಯೂಎ ಅಧ್ಯಕ್ಷ ಜೆ. ಭಾಸ್ಕರ್, ನಗರಸಭಾ ಸದಸ್ಯ ಜಾರ್ಜ್, ಐಸಾಕ್ ಲಿಂಕನ್, ಪೌಲ್ ಡಿಸೋಜಾ, ಥಾಮಸ್, ಜಾನ್ಸನ್, ಎಬಿಸಿಎಂಎಸ್ ರಾಜ್ಯ ಕಾರ್ಯದರ್ಶಿ ಸುರೇಶ್, ನಂದಾಕುಮಾರ್, ಫಾ. ಜ್ಞಾನ ಸುಂದರ್, ಫಾ. ಡ್ಯಾನಿಯಲ್, ಫಾ. ಹಬಕ್ಕೂರ್, ಮೋಸಸ್ ರೋಸಯ್ಯ, ಪ್ರಾನ್ಸಿಸ್ ಮತ್ತು ವಿಲ್ಸನ್ ಬಾಬು ಸೇರಿದಂತೆ ಉಪಸ್ಥಿತರಿದ್ದರು.
ಕರ್ನಾಟಕ ರಕ್ಷಣಾ ವೇದಿಕೆ :
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲೂಕು ಅಧ್ಯಕ್ಷ ರಂಗಸ್ವಾಮಿ ನೇತೃತ್ವದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಭಂಡಾರಹಳ್ಳಿ ಘಟಕದ ಅಧ್ಯಕ್ಷ ಮಂಜುನಾಥ್, ಡಿ. ಜಯರಾಮ್, ಪ್ರವೀಣ್‌ಕುಮಾರ್, ಕೆ. ಮಂಜುನಾಥ್, ನಾಗರಾಜ್, ಪಿ. ಸುಂದರ್, ರಘು, ನಾಗರಾಜ್(ಅಂಬೇಡ್ಕರ್‌ನಗರ), ಜಯರಾಮ್(ವೇಲೂರು ಶೆಡ್), ಎಚ್. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ):
ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಘಟನಾ ಸಂಚಾಲಕ ಎಂ. ಪಳನಿರಾಜ್ ನೇತೃತ್ವದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ತಾಲೂಕು ಸಂಚಾಲಕ ಕುಬೇಂದ್ರಪ್ಪ, ಜಿಲ್ಲಾ ಸಮಿತಿ ಸದಸ್ಯ ಎಸ್.ಆರ್ ಕಲ್ಲೇಶ್, ನಗರ ಸಂಚಾಲಕ ಪುಟ್ಟರಾಜ್, ಮುರಳಿಧರ, ರಾಮಾನಾಯ್ಕ, ಮಂಜುನಾಥ್, ಬಸವರಾಜ್, ಪೆರಿಸ್ವಾಮಿ, ಉದಯಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್‌ನಲ್ಲಿ ಗುರುವಾರ ಮುಸ್ಲಿಂ ಸಮಾಜದ ವಿವಿಧ ಸಂಘಟನೆಗಳ ಮುಖಂಡರಿಂದ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಮುಸ್ಲಿಂ ಸಮಾಜದ ವಿವಿಧ ಸಂಘಟನೆಗಳು:
ಮುಸ್ಲಿಂ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಪ್ರಮುಖರಾದ ಮುತುರ್ಜಾಖಾನ್, ದಿಲ್‌ದಾರ್, ಅಮಿರ್‌ಜಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್‌ನಲ್ಲಿ ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ :
ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನಗರಸಭಾ ಸದಸ್ಯ, ಸಮಾಜದ ಅಧ್ಯಕ್ಷ ಬಸವರಾಜ ಬಿ ಆನೆಕೊಪ್ಪ ನೇತೃತ್ವದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಸಮಾಜದ ಗೌರವಾಧ್ಯಕ್ಷ ಟಿ.ವಿ ಬಸವರಾಜಪ್ಪ, ಪ್ರಧಾನ ಕಾರ್ಯದರ್ಶಿ ಶಿವಾನಂದ, ಮಂಜುನಾಥ್ ಪಾಳೆಗಾರ್, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಉಳಿದಂತೆ ಅರುದಂತಿಯಾರ್ ಕ್ಷೇಮಾಭಿವೃದ್ಧಿ ಸಂಘದಿಂದ ಗೌರವ ಅಧ್ಯಕ್ಷ ಕುಪ್ಪಸ್ವಾಮಿ, ಅಧ್ಯಕ್ಷ ಎಂ. ಅಣ್ಣಾದೊರೈ ಮತ್ತು ಪದಾಧಿಕಾರಿಗಳು, ಸದಸ್ಯರು, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್ ಮತ್ತು ಪದಾಧಿಕಾರಿಗಳು, ಯುವ ಮುಖಂಡರಾದ ವೆಂಕಟೇಶ್ ಉಜ್ಜನಿಪುರ, ಉಮೇಶ್, ಶ್ಯಾಮ್, ಹಮಣ್ಣ, ವಿವೇಕ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ವತಿಯಿಂದ ರೈತ ವರಿಷ್ಠ ಕೆ.ಟಿ ಗಂಗಾಧರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವಿರೇಶ್ ಸೇರಿದಂತೆ ಪದಾಧಿಕಾರಿಗಳು, ರೈತ ಮುಖಂಡರು, ಬಂಜಾರ ಯುವ ಘಟಕದ ಅಧ್ಯಕ್ಷ ಕೃಷ್ಣನಾಯ್ಕ ಮತ್ತು ಪದಾಧಿಕಾರಿಗಳು ಹಾಗು ಪೊಲೀಸ್ ನಗರ ವೃತ್ತ ನಿರೀಕ್ಷ ರಾಘವೇಂದ್ರ ಕಾಂಡಿಕೆ ಮತ್ತು ಗ್ರಾಮಾಂತರ ವೃತ್ತ ನಿರೀಕ್ಷಕ ಚೈತನ್ಯ ಸೇರಿದಂತೆ ಇನ್ನಿತರರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಭದ್ರಾವತಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್‌ನಲ್ಲಿ ಗುರುವಾರ ಪೊಲೀಸ್ ನಗರ ವೃತ್ತ ನಿರೀಕ್ಷ ರಾಘವೇಂದ್ರ ಕಾಂಡಿಕೆ ಮತ್ತು ಗ್ರಾಮಾಂತರ ವೃತ್ತ ನಿರೀಕ್ಷಕ ಚೈತನ್ಯ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
No comments:
Post a Comment