ಭದ್ರಾವತಿ: ಕ್ರೀಡೆಯಲ್ಲಿ ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಮನೋಭಾವ ತೋರಿಸುವ ಮೂಲಕ ಪಂದ್ಯಾವಳಿ ಯಶಸ್ವಿಗೊಳಿಸುವಂತೆ ಮೈಕ್ರೋ ಸ್ಮಾಲ್ ಅಂಡ್ ಮೀಡಿಯಂ ಎಂಟರ್ಪ್ರೈಸಸ್-ಪಿ.ಸಿ(ಎಂಎಸ್ಎಂಇ-ಪಿ.ಸಿ) ರಾಜ್ಯ ಘಟಕದ ಅಧ್ಯಕ್ಷ ಎಚ್.ಸಿ ರಮೇಶ್ ಹೇಳಿದರು.
ಅವರು ಶನಿವಾರ ನಗರದ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ದೊಣಬಘಟ್ಟ ಸೆವೆನ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ನಗರದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಧ್ಯಕ್ಷ ಸುಂದರ್ ಬಾಬು ಮಾತನಾಡಿ, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡುವವರು ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ ರಮೇಶ್ ರವರು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಕ್ರೀಡಾಪಟುಗಳು ಪಂದ್ಯಾವಳಿಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಹಿರಿಯ ಅಂತರಾಷ್ಟ್ರೀಯ ಕ್ರೀಡಾಪಟು ಚೆನ್ನಯ್ಯ, ಬೆಂಗಳೂರಿನ ಯುವ ಸಹಕಾರಿ ಧುರೀಣ ಡಿ. ಸುನಿಲ್, ಮುಖಂಡರಾದ ರವಿಚಂದ್ರನ್, ಇಮ್ರಾನ್, ಚಂದ್ರು ದೇವರಹಳ್ಳಿ , ರಮೇಶ್ , ರವಿ, ತೋಪೇಗೌಡ ಮಹಿಳಾ ಪ್ರಮುಖರಾದ ರೇಖಾ, ಅನ್ನಪೂರ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪೊಲೀಸ್, ಮೆಸ್ಕಾಂ ,ಆರ್ ಎಎಫ್, ರೈಲ್ವೆ ಹಾಗೂ ಪಂಚಾಯತ್ ರಾಜ್ ಇಲಾಖೆಗಳ ತಂಡ ಹಾಗೂ ಶಿಕ್ಷಕರು ಮತ್ತು ವಕೀಲರು ಒಳಗೊಂಡ ಒಟ್ಟು ಎಂಟು ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಶಶಿ ಮತ್ತು ಸಂತೋಷ್ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.
No comments:
Post a Comment