ಭದ್ರಾವತಿ ನಗರದ ಹಿರಿಯ ನ್ಯಾಯವಾದಿ ಸೂರ್ಯಪ್ರಕಾಶ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಭದ್ರಾವತಿ, ಏ. ೭: ನಗರದ ಹಿರಿಯ ನ್ಯಾಯವಾದಿ ಸೂರ್ಯಪ್ರಕಾಶ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಪಕ್ಷದ ತತ್ವ, ಸಿದ್ಧಾಂತಗಳು ಹಾಗು ಅರವಿಂದ್ ಕೇಜ್ರಿವಾಲ್‌ರವರ ದೆಹಲಿ ಆಡಳಿತ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರೋಧ ಹೋರಾಟ ನಡೆಸುವ ಜೊತೆಗೆ ಭ್ರಷ್ಟಾಚಾರ ನಿರ್ಮೂಲನೆಗೆ ಶ್ರಮಿಸುತ್ತೇನೆ. ಪಕ್ಷದ ವಿಚಾರಧಾರೆಗಳು ನಗರ ಹಾಗು ಗ್ರಾಮೀಣ ಪ್ರದೇಶಗಳಿಗೆ ತಲುಪುವಂತೆ ಮಾಡಿ ಶ್ರೀಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
ಪಕ್ಷದ ಪ್ರಮುಖರಾದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪರಮೇಶ್ವರಚಾರ್, ಜಾವಿದ್, ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment