ಭದ್ರಾವತಿ ನಂಜನಗೂಡು ಶ್ರೀರಾಘವೇಂದ್ರಸ್ವಾಮಿಗಳ ಮಠದಲ್ಲಿ ಸೋಮವಾರ ಶ್ರೀ ಸುಶಮೀಂದ್ರತೀರ್ಥರ ಆರಾಧನಾ ಮಹೋತ್ಸವ ಸೋಮವಾರ ನಡೆಯಿತು.
ಭದ್ರಾವತಿ, ಏ. ೧೮: ನಗರದ ನಂಜನಗೂಡು ಶ್ರೀರಾಘವೇಂದ್ರಸ್ವಾಮಿಗಳ ಮಠದಲ್ಲಿ ಸೋಮವಾರ ಶ್ರೀ ಸುಶಮೀಂದ್ರತೀರ್ಥರ ಆರಾಧನಾ ಮಹೋತ್ಸವ ಸೋಮವಾರ ನಡೆಯಿತು.
ಪಂಚಾಮೃತ ಅಭಿಷೇಕದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಪಂಡಿತ್ ಭೀಮಾಚಾರ್‌ರವರು ಶ್ರೀ ಸುಶಮೀಂದ್ರತೀರ್ಥರು ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಪ್ರವಚನ ನಡೆಸಿಕೊಟ್ಟರು.
ನಂತರ ಶ್ರೀಮಠದ ಪ್ರಾಕಾರದಲ್ಲಿ ಶ್ರೀ ಸುಶಮೀಂದ್ರ ತೀರ್ಥರ ಭಾವಚಿತ್ರದೊಂದಿಗೆ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಅಷ್ಟಾವಧಾನ, ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಶ್ರೀಮಠದ ಶೇಷಗಿರಿ ಆಚಾರ್ ಮತ್ತು ಗೋಪಾಲಚಾರ್, ಶ್ರೀನಿವಾಸಚಾರ್, ಪ್ರಧಾನ ಅರ್ಚಕ ಜಗನ್ನಾಥಚಾರ್, ವೆಂಕಟೇಶ, ಜಯತೀರ್ಥ, ರಮಾಕಾಂತ್, ವೆಂಕಟೇಶ್, ರಾಘವೇಂದ್ರ, ವಾಸುದೇವಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment