ಭದ್ರಾವತಿ ಹೊಸ ನಂಜಾಪುರ ಗ್ರಾಮದಲ್ಲಿ ಸುಮಾರು ಎರಡು ಎಕರೆ ಜಾಗದಲ್ಲಿರುವ ಬೌದ್ಧವಿಹಾರದಲ್ಲಿ ಧ್ಯಾನ ಮಂದಿರ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಭದ್ರಾವತಿ, ಏ. ೩: ಹೊಸ ನಂಜಾಪುರ ಗ್ರಾಮದಲ್ಲಿ ಸುಮಾರು ಎರಡು ಎಕರೆ ಜಾಗದಲ್ಲಿರುವ ಬೌದ್ಧವಿಹಾರದಲ್ಲಿ ಧ್ಯಾನ ಮಂದಿರ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ, ಬೌದ್ಧ ಧರ್ಮದ ಅನುಯಾಯಿಯಾಗಿರುವ ಶ್ರೀನಿವಾಸ್‌ರವರು ತಮ್ಮ ಸ್ವಂತ ಜಮೀನಿನಲ್ಲಿ ೨ ಎಕರೆ ಜಾಗ ಬೌದ್ಧ ವಿಹಾರ ನಿರ್ಮಾಣಕ್ಕೆ ಉಚಿತವಾಗಿ ನೀಡಿದ ಹಿನ್ನಲೆಯಲ್ಲಿ ‘ಸಂಬುದ್ಧ ಧಮ್ಮಾಂಕುರ ಟ್ರಸ್ಟ್’ ಅಸ್ತಿತ್ವಕ್ಕೆ ಬರುವ ಮೂಲಕ ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬೌದ್ಧ ವಿಹಾರ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
ಇದೀಗ ಧ್ಯಾನ ಮಂದಿರ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಟ್ರಸ್ಟ್ ಅಧ್ಯಕ್ಷ, ಬೌದ್ಧ ಧರ್ಮ ಉಪಾಸಕ ಪ್ರೊ. ಎಚ್. ರಾಚಪ್ಪ ಬೌದ್ಧ ಧರ್ಮದ ಆಚರಣೆಗಳನ್ನು ನೆರವೇರಿಸಿಕೊಟ್ಟರು. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದು, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಬಿ.ಕೆ ಮೋಹನ್, ಪ್ರೇಮಾ, ಉದಯಕುಮಾರ್, ಎಂಜಿನಿಯರ್ ರಂಗರಾಜಪುರೆ, ಟ್ರಸ್ಟ್ ಪ್ರಮುಖರಾದ ಸುರೇಶ್, ಬದರಿನಾರಾಯಣ, ಶಿವಬಸಪ್ಪ, ಬಿ.ಡಿ ಸಾವಕ್ಕನವರ್, ಬಿ.ಎಸ್ ಗಣೇಶ್, ಶಾಂತಿ, ಅನಿಲ್‌ಕುಮಾರ್, ಪುಟ್ಟರಾಜು, ಕಿರಣ್, ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment