ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ತುಮಕೂರು ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಹುಟ್ಟುಹಬ್ಬ ಶುಕ್ರವಾರ ವಿಜೃಂಭಣೆಯಿಂದ ಆಚರಿಸಲಾಯಿತು.
ಭದ್ರಾವತಿ, ಏ. ೧: ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ತುಮಕೂರು ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಹುಟ್ಟುಹಬ್ಬ ಶುಕ್ರವಾರ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಬಾರಿ ಗ್ರಾಮದ ಪ್ರಮುಖರು ಒಂದೆಡೆ ಸೇರಿ ವಿಶೇಷವಾಗಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟುಹಬ್ಬ ಆಚರಿಸುವ ಮೂಲಕ ಗಮನ ಸೆಳೆದರು. ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಮೂಲಕ ಗೌರವ ಸಲ್ಲಿಸಲಾಯಿತು. ನಂತರ ಸಿಹಿ ಹಂಚಿಕೆಯೊಂದಿಗೆ ದಾಸೋಹ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಅಧ್ಯಕ್ಷೆ ಗೌರಮ್ಮ, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮಾದೇವಿ, ಮಾಜಿ ಅಧ್ಯಕ್ಷೆ ಮಲ್ಲಕ್ ವೀರಪ್ಪನ್, ಸದಸ್ಯರಾದ ವಿಶ್ವನಾಥ್, ಸಿದ್ದಮ್ಮ ನಾಗೇಶ್, ಮುಖಂಡರಾದ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಎಸ್. ಮಹಾದೇವ, ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಆರ್. ನಾಗರಾಜ್ ಕೂಡ್ಲಿಗೆರೆ, ಮಂಜುನಾಥ್ ವೆಲ್ಡಿಂಗ್, ಜಯಣ್ಣ, ಶಾಲಿನಿ, ಪ್ರಶಾಂತ್ ಕೋಳಿ ಮತ್ತು ತಂಡದವರು, ಕಾಂಗ್ರೆಸ್ ಮಾಧ್ಯಮ ವಿಭಾಗದ ಪ್ರವೀಣ್‌ನಾಯ್ಕ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment