ಭದ್ರಾವತಿ, ಏ. ೨೯: ಟಿ.ವಿ ಕೇಬಲ್‌ನಲ್ಲಿ ವಿದ್ಯುತ್ ಹರಿದ ಪರಿಣಾಮ ೪ ವರ್ಷದ ಹೆಣ್ಣು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಇಂಚರ(೪) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಈಕೆ ಗ್ರಾಮದ ನಿವಾಸಿ ಸಂತೋಷ್ ಮತ್ತು ಪೂಜಾ ದಂಪತಿ ಪುತ್ರಿಯಾಗಿದ್ದು, ವಿದ್ಯುತ್ ತಂತಿಗೆ ಸಂಪರ್ಕಗೊಂಡಿದ್ದ ಟಿವಿ ಕೇಬಲ್ ಕತ್ತರಿಸಿಕೊಂಡು ಕೆಳಗೆ ತಂತಿ ಬೇಲಿ ಮೇಲೆ ಬಿದ್ದಿದೆ. ಈ ಕೇಬಲನ್ನು ಆಟವಾಡುವಾಗ ಬಾಲಕಿ ಮುಟ್ಟಿದ್ದು, ಇದರಿಂದಾಗಿ ವಿದ್ಯುತ್ ತಗುಲಿ ಮೃತಪಟ್ಟಿದೆ ಎನ್ನಲಾಗಿದೆ.
ಘಟನೆ ಬೆಳಿಗ್ಗೆ ಸುಮಾರು ೯.೩೦ರ ಸಮಯದಲ್ಲಿ ನಡೆದಿದ್ದು, ವಿದ್ಯುತ್ ತಗುಲಿ ತೀವ್ರ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕಿ ಮೃತಪಟ್ಟಿದ್ದು, ಈ ಸಂಬಂಧ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
No comments:
Post a Comment