ಭದ್ರಾವತಿ, ಏ. ೨೧: ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘ ಹಾಗು ಆರ್‌ಎಸ್‌ಎನ್ ಸ್ಪೋಟ್ಸ್ ಕ್ಲಬ್ ವತಿಯಿಂದ ಏ.೨೩ ಮತ್ತು ೨೪ ಎರಡು ದಿನಗಳ ಕಾಲ ನಗರದ ನ್ಯೂಟೌನ್ ಆಂಜನೇಯ ಅಗ್ರಹಾರ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದ ಸಮೀಪ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಮುಂದೂಡಲಾಗಿದೆ.
ಏ.೩೦ ಮತ್ತು ಮೇ.೧ರಂದು ಪಂದ್ಯಾವಳಿ ನಡೆಯಲಿದ್ದು, ಕ್ರೀಡಾಪಟುಗಳು ಹಾಗು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪಂದ್ಯಾವಳಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೯೯೦೨೧೯೨೦೨೩ ಅಥವಾ ೯೯೬೪೪೪೬೧೨೩ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment