ಗೃಹ ಸಚಿವ ಅರಗ ಜ್ಞಾನೆಂದ್ರ ವಿರುದ್ಧ ಯುವ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕಗಳಿಂದ ಗುರುವಾರ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಯಿತು.
ಭದ್ರಾವತಿ, ಏ. ೭: ಗೃಹ ಸಚಿವ ಅರಗ ಜ್ಞಾನೆಂದ್ರ ವಿರುದ್ಧ ಯುವ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಘಟಕಗಳಿಂದ ಗುರುವಾರ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಗೃಹ ಸಚಿವರು ಜಾತಿ-ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿದ್ದು, ಈ ಹೇಳಿಕೆಯನ್ನು ಯುವ ಕಾಂಗ್ರೆಸ್ ಖಂಡಿಸುತ್ತದೆ. ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.
ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆಯವರಿಗೆ ದೂರು ನೀಡಲಾಯಿತು. ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್, ಉಪಾಧ್ಯಕ್ಷ ತಬ್ರೇಜ್ ಖಾನ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಚಿನ್ ಸಿಂಧ್ಯಾ, ಕೇಶವ, ಅಮೋಸ್, ಸಜ್ಜಾದ್, ಸೈಯದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment