ಭದ್ರಾವತಿಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಸರ್ಕಾರಿ ದಿನಗೂಲಿ ನೌಕರರ ಸಂಘದ ವತಿಯಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಗಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಏ. ೬: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಸರ್ಕಾರಿ ದಿನಗೂಲಿ ನೌಕರರ ಸಂಘದ ವತಿಯಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ ಗಾಮನಗಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.
೨೦೧೭ರವರೆಗೆ ಕನಿಷ್ಠ ೧೦ ವರ್ಷ ಕರ್ತವ್ಯ ಪೂರೈಸಿ ಉದ್ಯೋಗದಿಂದ ವಂಚಿತರಾಗಿರುವ ನೌಕರರನ್ನು ಪುನಃ ನೇಮಕ ಮಾಡಿಕೊಳ್ಳಬೇಕು. ದಿನಗೂಲಿಯನ್ನು ನಂಬಿ ಬದುಕುತ್ತಿರುವ ನೌಕರರಿಗೆ ಯಾವುದೇ ಕಾರಣಕ್ಕೂ ಉದ್ಯೋಗ ಕಡಿತಗೊಳಿಸಬಾರದು. ಅಲ್ಲದೆ ಕರ್ತವ್ಯ ಸಮಯ ನಿಗದಿಗೊಳಿಸಬೇಕು. ನೌಕರರನ್ನು ನಿಗದಿತ ಸಮಯ ಮೀರಿ ಕರ್ತವ್ಯಕ್ಕೆ ಬಳಸಿಕೊಳ್ಳಬಾರದು. ೧೦ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಬ್ಯಾಂಕ್ ಖಾತೆ ಮೂಲಕ ಓಚರ್ ಮೇಲೆ ಸಹಿ ಪಡೆದು ವೇತನ ಪಾವತಿಸಬೇಕು. ಎಲ್ಲಾ ಸರ್ಕಾರಿ ದಿನಗೂಲಿ ನೌಕರರಿಗೂ ಇಎಸ್‌ಐ ಮತ್ತು ಇಪಿಎಫ್ ಸೌಲಭ್ಯ ಕಲ್ಪಿಸಿಕೊಡಬೇಕು. ವೈಯಕ್ತಿಕ ಹಿತಾಸಕ್ತಿ ಹಿನ್ನಲೆಯಲ್ಲಿ ವಿನಾಕಾರಣ ನೌಕರರನ್ನು ಕರ್ತವ್ಯದಿಂದ ವಜಾಗೊಳಿಸಿ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು.
ತಕ್ಷಣ ಬೇಡಿಕೆಗಳನ್ನು ಈಡೇರಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.
ಸಂಘದ ಗೌರವಾಧ್ಯಕ್ಷ ಶಿವಕುಮಾರ್, ರಾಜ್ಯಾಧ್ಯಕ್ಷ ಎಚ್.ಕೆ ಹಿಂಚವಳ್ಳಿ ಶಂಕರಪ್ಪ, ಉಪಾಧ್ಯಕ್ಷ ಎಚ್.ಎಸ್ ಹರೀಶ್, ಕಾರ್ಯದರ್ಶಿ ಸಿ. ಬಸವರಾಜು ಮತ್ತು ಖಜಾಂಚಿ ಸಿ. ಪ್ರದೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment