ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮದಿನಾಚರಣೆ ಕಾಯಕ್ರಮದ ಪೂರ್ವಭಾವಿ ಸಭೆಯಲ್ಲಿ ವೀರಶೈವ ಲಿಂಗಾಯಿತ ಸಮಾಜದ ಮುಖಂಡ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಮಾತನಾಡಿದರು.
ಭದ್ರಾವತಿ, ಏ. ೧೫ : ವೀರಶೈವ ಲಿಂಗಾಯಿತರು ತಾಲೂಕಿನಲ್ಲಿ ಸುಮಾರು ೭೦ ರಿಂದ ೭೫ ಸಾವಿರ ಜನಸಂಖ್ಯೆ ಹೊಂದಿದ್ದು, ಎಲ್ಲರೂ ಒಗ್ಗಟ್ಟಾಗಿ ಬಲಿಷ್ಠ ಸಮಾಜ ಕಟ್ಟುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಸಮಾಜದ ಮುಖಂಡ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಹೇಳಿದರು.
ಅವರು ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮದಿನಾಚರಣೆ ಕಾಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ತಾಲೂಕಿನಲ್ಲಿ ಬಹುದೊಡ್ಡ ಸಮಾಜವಾಗಿದ್ದರೂ ಸಹ ಒಗ್ಗಟ್ಟು ಕಂಡು ಬರುತ್ತಿಲ್ಲ. ಸಮಾಜದ ಎಲ್ಲಾ ಒಳಪಂಗಡಗಳು ಸಹ ತಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ತೊರೆದು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ. ಸಮಾಜವನ್ನು ಎಲ್ಲಾ ರೀತಿಯಿಂದಲೂ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ. ಸಮಾಜದ ಪ್ರತಿಯೊಬ್ಬರ ಕಷ್ಟಸುಖಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕಾಗಿದೆ ಎಂದರು.
ಸಿದ್ದಗಂಗಾ ಶ್ರೀಗಳ ಜನ್ಮದಿನಾರಣೆ ಮೇ ತಿಂಗಳಿನಲ್ಲಿ ಅದ್ದೂರಿಯಾಗಿ ಆಚರಿಸಲು ಈಗಾಗಲೇ ತೀರ್ಮಾನಿಸಲಾಗಿದ್ದು, ವಿವಿಧ ಸಮಿತಿ ಗಳನ್ನು ರಚಿಸಿ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಸಮಾಜದ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರಕೆರೆ ಎಚ್.ಎಲ್ ಷಡಾಕ್ಷರಿ, ಜಂಗಮ ಸಮಾಜದ ಅಧ್ಯಕ್ಷ ಅಡವೀಶಯ್ಯ, ಅಖಿಲ ಭಾರತ ವೀಶೈವ ಮಹಾಸಭಾ ತಾಲೂಕು ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ್ ಮತ್ತು ಸಾಧು ವೀರಶೈವ ಸಮಾಜದ ಅಧ್ಯಕ್ಷೆ ಯಶೋಧ ವೀರಭದ್ರಪ್ಪ ಹಾಗು ಸಾಧು ವೀರಶೈವ ಸಮಾಜದ ಯುವ ಘಟಕದ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಇನ್ನಿತರರು ವೀರಶೈವ ಲಿಂಗಾಯಿತ ಸಮಾಜವನ್ನು ಮತ್ತಷ್ಟು ಸಂಘಟಿಸುವ ಕುರಿತು ಮಾತನಾಡಿದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ನೋಳಂಬ ವೀರಶೈವ ಸಮಾಜದ ಉಪಾದ್ಯಕ್ಷ ರಾಜು, ವಕೀಲರ ಸಂಘದ ಉಪಾಧ್ಯಕ್ಷ ವಿಶ್ವನಾಥ್, ಪಂಚಮಸಾಲಿ ಸಮಾಜದ ಅಧ್ಯಕ್ಷ ಸತೀಶ್, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಹಳೇನಗರ ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್‌ಕುಮಾರ್, ವೀರಶೈವ ಲಿಂಗಾಯಿತ ಮಹಿಳಾ ಸಮಾಜದ ಆರ್.ಎಸ್.ಶೋಭಾ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ವೀರಶೈವ ಸಮಾಜ ತಾಲೂಕು ಘಟಕದ ನೂತನ ಅಧ್ಯಕ್ಷ ಕೆ.ಎಚ್.ತೀರ್ಥಯ್ಯ ಮತ್ತು ನೇಪಾಳದಲ್ಲಿ ನಡೆಯಲಿರುವ ೧೬ವರ್ಷ ಒಳಗಿನ ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಗೆ ಆಯ್ಕೆಯಾಗಿರುವ ಬಾರಂದೂರಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿ ಸಮರ್ಥ ಎಂ. ಪಾಟೀಲ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಸಮಾಜದ ಮುಖಂಡರಾದ ವಾಗೀಶ್ ಸ್ವಾಗತಿಸಿದರು. ಎಂ.ಪರಮೇಶ್ವರ ನಿರೂಪಿಸಿದರು. ತೀರ್ಥಯ್ಯ ಪ್ರಸ್ತಾವಿಕ ನುಡಿಗಳನ್ನಾಡಿದರು.
No comments:
Post a Comment