ಎ.ಕೆ ನಾಗೇಂದ್ರಪ್ಪ
ಭದ್ರಾವತಿ, ಏ. ೧೧: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೋಮವಾರ ಮುಕ್ತಾಯಗೊಂಡಿದ್ದು, ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲರಿಗೂ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.
ಕೊನೆಯ ದಿನ ೪೫೧೫ ವಿದ್ಯಾರ್ಥಿಗಳ ಪೈಕಿ ೪೩೮೩ ವಿದ್ಯಾರ್ಥಿಗಳು ೧೩೨ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಈ ಪೈಕಿ ೪ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿನಿಯರಾಗಿದ್ದಾರೆ. ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪಿನ ನಂತರವೂ ಉಂಟಾದ ಹಿಜಾಬ್ ಸಮಸ್ಯೆ ನಡೆವೆಯೂ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ನಾಗೇಂದ್ರಪ್ಪ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕಡಿಮೆ ಅವಧಿಯಲ್ಲಿ ಹೆಚ್ಚಿನ ಶ್ರಮವಹಿಸಿ ಮೊದಲ ಬಾರಿಗೆ ತಾಲೂಕಿನಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಸಹಕರಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
No comments:
Post a Comment