ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಏ. ೧೯: ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೂಲಿ ದರ ಹೆಚ್ಚು ಮಾಡಿದ್ದು, ಗ್ರಾಮೀಣ ಭಾಗದ ನಿರುದ್ಯೋಗಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಯೋಜನೆಯ ಸಹಾಯಕ ನಿರ್ದೇಶಕ ಚೇತನ್ ಮನವಿ ಮಾಡಿದರು.
ಅವರು ತಾಲೂಕಿನ ಅರಕೆರೆ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಗಂಡು ಮತ್ತು ಹೆಣ್ಣು ಇಬ್ಬರಿಗೂ ಸಮಾನ ವೇತನ ನೀಡಲಾಗುತ್ತಿದೆ. ಸರ್ಕಾರ ಕೂಲಿ ದರ ಹೆಚ್ಚಳ ಮಾಡಿದ್ದು, ರು.೩೦೯ ನಿಗದಿಪಡಿಸಿದೆ. ಕೂಲಿ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ಬೇಸಿಗೆ ಸಮಯದಲ್ಲಿ ಹೆಚ್ಚಿನ ಉದ್ಯೋಗ ಲಭ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಹಾಗು ಸಿಬ್ಬಂದಿಗಳು, ಗ್ರಾಮದ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment