ವಿಶ್ವ ಪುಸ್ತಕ ದಿನದ ಅಂಗವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸಾರ್ವಜನಿಕ ವಾಚನಾಲಯ ಮತ್ತು ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಗ್ರಂಥಾಲಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸ ಸಲ್ಲಸುತ್ತಿರುವ ರಾಜ್‌ಕುಮಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಏ. ೨೫: ಪುಸ್ತಕ ಓದುವ, ಓದಿದ್ದನ್ನು ಅರ್ಥೈಸಿಕೊಳ್ಳುವ, ನಾಲ್ಕಾರು ಜನರಿಗೆ ತಿಳುವಳಿಕೆ ನೀಡುವ ಉನ್ನತ ಸಂಸ್ಕೃತಿ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಹೇಳಿದರು.
ಅವರು ವಿಶ್ವ ಪುಸ್ತಕ ದಿನದ ಅಂಗವಾಗಿ ಪರಿಷತ್ ವತಿಯಿಂದ ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸಾರ್ವಜನಿಕ ವಾಚನಾಲಯ ಮತ್ತು ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ಎಲ್ಲರೂ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳುವ ಜೊತೆಗೆ ಪುಸ್ತಕ ಉಡುಗೊರೆ ನೀಡುವ ಸಂಸ್ಕೃತಿ ಮೈಗೂಡಿಸಿಕೊಳ್ಳಬೇಕೆಂದರು.
ಗ್ರಂಥಾಲಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಜೊತೆಗೆ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪುಸ್ತಕ ಪ್ರಕಾಶಕರಾಗಿ, ಕಲೆ ಮತ್ತು ಸಾಹಿತ್ಯವನ್ನು ಪ್ರೋತ್ಸಾಹಿಸಿಕೊಂಡು ಬರುತ್ತಿರುವ ರಾಜ್‌ಕುಮಾರ್ ಅವರನ್ನು ಪರಿಷತ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಪರಿಷತ್ ಪದಾಧಿಕಾರಿಗಳಾದ ತಿಮ್ಮಪ್ಪ, ಜಗದೀಶ್, ಅನಿಲ್‌ಕುಮಾರ್, ನಗರಸಭಾ ಸದಸ್ಯ ಬಸವರಾಜ ಬಿ ಆನೇಕೊಪ್ಪ, ಸಾಹಿತ್ಯ ಪ್ರೇಮಿಗಳಾದ ಭಾಸ್ಕರ್, ಚಂದ್ರಶೇಖರಪ್ಪ, ರಂಗನಾಥ್, ರಾಜು, ರಾಮೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ರಂಗನಾಥ್ ಸ್ವಾಗತಿಸಿ, ಗುರು ವಂದಿಸಿದರು.
Congrts dear Rajkumar.As a donor& true lover of kannada doing good work.You deserve all rewards.
ReplyDeleteK M Satheesh