ಭದ್ರಾವತಿ: ತಾಲೂಕು ಛಲವಾದಿಗಳ ಸಮಾಜದ ನೂತನ ಭವನ ನಿರ್ಮಾಣಕ್ಕೆ ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು.
ಸಮಾಜದ ಅಧ್ಯಕ್ಷ, ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಇಂಜಿನಿಯರ್ ರಂಗರಾಜಪುರ ಬೌದ್ಧಧರ್ಮದ ಸಂದೇಶಗಳನ್ನು ವಾಚಿಸಿದರು.
ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಮಂಜುನಾಥ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಹ.ಮ ನಾಗಾರ್ಜುನ ಉಪನ್ಯಾಸ ನಡೆಸಿಕೊಟ್ಟರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರತಿಭಾ ಪುರಸ್ಕಾರ ನೆರವೇರಿಸಿಕೊಟ್ಟರು.
ನಗರಸಭಾ ಸದಸ್ಯರಾದ ಬಿ.ಕೆ ಮೋಹನ್, ಉದಯಕುಮಾರ್, ಪ್ರೇಮ, ಅನ್ನಪೂರ್ಣ, ಸರ್ವಮಂಗಳ, ಕಾಂತರಾಜ್, ದೊಡ್ಡೇರಿ ಗ್ರಾ.ಪಂ. ಉಪಾಧ್ಯಕ್ಷೆ ಹೇಮಾವತಿ, ಸಿಂಗನಮನೆ ಗ್ರಾ.ಪಂ. ಸದಸ್ಯೆ ಚಂದನಮಧು, ಹಿರಿಯೂರು ಗ್ರಾ.ಪಂ. ಸದಸ್ಯ ಕಿರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬದರಿ ನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್ ಎಸ್ ಬೈರಪ್ಪ ಸ್ವಾಗತಿಸಿದರು. ಕೆ ತಿಪ್ಪೇಸ್ವಾಮಿ ನಿರೂಪಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
No comments:
Post a Comment