ಭದ್ರಾವತಿ ತಾಲೂಕಿನ ಸುಲ್ತಾನ್ ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಅಂತರಾಷ್ಟ್ರೀಯ ಜಾನಪದ ಕಲಾವಿದ ಎಂ.ಆರ್ ರೇವಣಪ್ಪನವರ 'ನನ್ನೊಳಗೆ' ಕವನ ಸಂಕಲನ ಬಿಡುಗಡೆ ಸಮಾರಂಭ ಹೊಸನಗರ ತಾಲೂಕಿನ ಮಾದಾಪುರದಲ್ಲಿ ನಡೆಯಿತು.
ಭದ್ರಾವತಿ, ಏ. ೧೫: ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ತಾಲೂಕಿನ ಸುಲ್ತಾನ್ ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಅಂತರಾಷ್ಟ್ರೀಯ ಜಾನಪದ ಕಲಾವಿದ ಎಂ.ಆರ್ ರೇವಣಪ್ಪನವರ ‘ನನ್ನೊಳಗೆ’ ಕವನ ಸಂಕಲನ ಬಿಡುಗಡೆ ಹಾಗು ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹೊಸನಗರ ತಾಲೂಕಿನ ಮಾದಾಪುರದಲ್ಲಿ ನಡೆಯಿತು.
ಶಿವಮೊಗ್ಗ ಜಾನಪದ ಕಲಾ ಮತ್ತು ಸಾಹಿತ್ಯ ವೇದಿಕೆ ಹಾಗು ಮಾದಾಪುರ ಶ್ರೀ ಶನಿಪರಮೇಶ್ವರ ಯುವಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಎಂ.ಆರ್ ರೇವಣಪ್ಪನವರ ಮಾತೃಶ್ರೀ ಭರ್ಮಮ್ಮ ‘ನನ್ನೊಳಗೆ’ ಕವನ ಸಂಕಲನ ಬಿಡುಗಡೆಗೊಳಿಸಿದರು.
ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಸದಸ್ಯೆ ಶ್ವೇತಾ ಆರ್. ಬಂಡಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಹಾಲವಳ್ಳಿ, ಮಾಜಿ ಸದಸ್ಯೆ ಸರಸ್ವತಿ ಗಣಪತಿ, ಗ್ರಾ.ಪಂ. ಮಾಜಿ ಸದಸ್ಯ ಎಂ.ಆರ್ ಲೋಕಪ್ಪ, ಉದ್ಯಮಿ ಬಿ.ಕೆ ಜಗನ್ನಾಥ್, ಶಿಕ್ಷಕರಾದ ಯು. ಮಹಾದೇವಪ್ಪ, ಧನಂಜಯ ಮತ್ತು ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಮತ್ತು ಶ್ರೀ ಶನಿಪರಮೇಶ್ವರ ಯುವಕ ಸಂಘದ ಅಧ್ಯಕ್ಷ ಜಿ. ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಗಣೇಶ್, ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಶಿಕ್ಷಕಿ ಭಾರತಿ ಗೋವಿಂದಸ್ವಾಮಿ, ಮಹಾಬಲೇಶ್ವರ ಹೆಗಡೆ, ಹುಚ್ಚಪ್ಪ ಮಾಸ್ಟರ್, ಲಕ್ಷ್ಮಣ್ ರಾವ್ ಬೋರತ್, ನಿಸ್ಸಾರ್ ಖಾನ್ ಕೆಂಚಾಯಿಕೊಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಜ್ಯೂನಿಯರ್ ಶಂಕರ್‌ನಾಗ್, ಜ್ಯೂನಿಯರ್ ವಿಷ್ಣುವರ್ಧನ್ ಮತ್ತು ಜ್ಯೂನಿಯರ್ ಪುನೀತ್ ರಾಜ್‌ಕುಮಾರ್ ಕಲಾವಿದರಿಂದ ಸಾಂಸ್ಕೃತಿಕ ಮನರಂಜನೆ ಕಾರ್ಯಕ್ರಮಗಳು ಜರುಗಿದವು. ಎಂ.ಆರ್ ರೇಣಪ್ಪ ನಿರ್ದೇಶನದಲ್ಲಿ ಸಂಗ್ಯಾ ಬಾಳ್ಯ ನಾಟಕ ಶ್ರೀ ಶನಿಪರಮೇಶ್ವರ ಯುವಕ ಸಂಘದ ಕಲಾವಿದರಿಂದ ಪ್ರದರ್ಶನಗೊಂಡು ಪ್ರೇಕ್ಷಕರ ಮನಸೂರೆಗೊಂಡಿತು.
No comments:
Post a Comment