ಸ್ಥಳ ಪರಿಶೀಲನೆ ನಡೆಸಿದ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ
ಭದ್ರಾವತಿ ನಗರಸಭೆ ವ್ಯಾಪ್ತಿಯ ತಮ್ಮಣ್ಣ ಕಾಲೋನಿಯಲ್ಲಿರುವ ಕೆರೆ ಕೋಡಿ ಶಿಥಿಲಗೊಂಡಿದ್ದು, ಇದರಿಂದಾಗಿ ಕೆರೆ ನೀರು ಹರಿದು ರಸ್ತೆ ಹಾಳಾಗಿದೆ. ಈ ಹಿನ್ನಲೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಭದ್ರಾವತಿ, ಏ. ೬: ನಗರಸಭೆ ವ್ಯಾಪ್ತಿಯ ತಮ್ಮಣ್ಣ ಕಾಲೋನಿಯಲ್ಲಿರುವ ಕೆರೆ ಕೋಡಿ ಶಿಥಿಲಗೊಂಡಿದ್ದು, ಇದರಿಂದಾಗಿ ಕೆರೆ ನೀರು ಹರಿದು ರಸ್ತೆ ಹಾಳಾಗಿದೆ. ಈ ಹಿನ್ನಲೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಕೆರೆ ಕೋಡಿ ಪಕ್ಕದಲ್ಲಿರುವ ರಸ್ತೆಯು ರೈತರ ಜಮೀನುಗಳಿಗೆ ಸಂಪರ್ಕಗೊಂಡಿದ್ದು, ರಸ್ತೆ ಹಾಳಾಗಿರುವುದರಿಂದ ಈ ಭಾಗದಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ. ಈ ಹಿನ್ನಲೆಯಲ್ಲಿ ರೈತರು ಹಾಗು ಸ್ಥಳೀಯರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್ ನೇತೃತ್ವದಲ್ಲಿ ಕಾಡಾ ಅಧ್ಯಕ್ಷರನ್ನು ಭೇಟಿ ಮಾಡಿ ಸಮಸ್ಯೆ ವಿವರಿಸಿದ್ದರು.
ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದ ಅಧ್ಯಕ್ಷರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ರೈತರು ಹಾಗು ಸ್ಥಳೀಯರು ಕೆರೆ ಕೋಡಿ ಬಳಿ ರಸ್ತೆಗೆ ಮೇಲ್ಸೇತುವೆ ನಿರ್ಮಿಸುವಂತೆ ಮನವಿ ಮಾಡಿದರು.
No comments:
Post a Comment