ಭದ್ರಾವತಿಯಲ್ಲಿ ರಾಮ್ ಸೇನಾ ಕರ್ನಾಟಕ ಸಂಘಟನೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಶ್ರೀ ರಾಮನವಮಿ ಆಚರಿಸಲಾಯಿತು.
ಭದ್ರಾವತಿ, ಏ. ೧೦: ರಾಮ್ ಸೇನಾ ಕರ್ನಾಟಕ ಸಂಘಟನೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಶ್ರೀ ರಾಮನವಮಿ ಆಚರಿಸಲಾಯಿತು.
ಶ್ರೀ ರಾಮನವಮಿ ಅಂಗವಾಗಿ ವಿಶೇಷ ಧಾರ್ಮಿಕ ಆಚರಣೆಗಳೊಂದಿಗೆ ಸಾರ್ವಜನಿಕರಿಗೆ ಪಾನಕ ಮತ್ತು ಕೋಸಂಬರಿ ವಿತರಿಸಲಾಯಿತು. ರಾಮ್ ಸೇನಾ ಕರ್ನಾಟಕ ಸಂಘಟನೆ ಮುಖಂಡರು, ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಹಾಕಿ ಸಂಭ್ರಮಿಸಿದರು. ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.
ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತ, ಪ್ರಮುಖರಾದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಲವೇಶ್‌ಗೌಡ, ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಯುವ ಘಟಕದ ಅಧ್ಯಕ್ಷ ವಿಜಯ್‌ರಾಜ್, ಜಿಲ್ಲಾ ಕಾರ್ಯದರ್ಶಿ ಧನುಷ್ ಬೋಸ್ಲೆ, ರಾಮ್ ಸೇನಾ ಕರ್ನಾಟಕ ಸಂಘಟನೆ ಪ್ರಮುಖರಾದ ಉಮೇಶ್‌ಗೌಡ, ಸಚಿನ್ ವರ್ಣೇಕರ್, ಅವಿನಾಶ್, ನವೀನ್, ಕಿರಣ್‌ಗೌಡ, ಹೇಮಂತ್, ರಮೇಶ್, ಕೃಷ್ಣ ಜೋಗಿ, ಪ್ರಭು, ಕಾಂತರಾಜ್, ಸಂತೋಷ್, ಮಂಜುನಾಥ್, ರೋಹಿತ್ ಪ್ರವೀಣ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿಯಲ್ಲಿ ರಾಮ್ ಸೇನಾ ಕರ್ನಾಟಕ ಸಂಘಟನೆ ವತಿಯಿಂದ ನಗರದ ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಶ್ರೀ ರಾಮನವಮಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
No comments:
Post a Comment