ಭದ್ರಾವತಿ ಕರ್ನಾಟಕ ಸ್ಟ್ರೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಭಾನುವಾರ ಕಾರ್ಮಿಕರ ದಿನಾಚರಣೆ ಆಚರಿಲಾಯಿತು.
ಭದ್ರಾವತಿ, ಮೇ. ೧: ಕರ್ನಾಟಕ ಸ್ಟ್ರೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಭಾನುವಾರ ಕಾರ್ಮಿಕರ ದಿನಾಚರಣೆ ಆಚರಿಲಾಯಿತು.
ನ್ಯೂಟೌನ್ ಆಂಜನೇಯ ಅಗ್ರಹಾರದಲ್ಲಿರುವ ಸಂಘದ ಕಛೇರಿಯಲ್ಲಿ ಯೂನಿಯನ್ ಪ್ರಮುಖರು ಕಾರ್ಮಿಕರ ದಿನಾಚರಣೆ ಆಚರಿಸುವ ಮೂಲಕ ಕಟ್ಟಡ ಮತ್ತು ಇತರೆ ನಿರ್ಮಾಣ ಹಾಗು ಅಸಂಘಟಿತ ಕಾರ್ಮಿಕರು ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಲಾಯಿತು.
ಯೂನಿಯನ್ ಉಪಾಧ್ಯಕ್ಷ ಬಿ.ಎಚ್ ನಾಗೇಂದ್ರ ರೆಡ್ಡಿ, ನಿರ್ದೇಶಕ ಅಂತೋಣಿ ಕ್ರೂಸ್, ಪದಾಧಿಕಾರಿಗಳಾದ ನಾರಾಯಣ ಸ್ವಾಮಿ, ಕೃಷ್ಣ, ಜಯರಾಮ್, ಮಾರಸ್ವಾಮಿ, ಲಿಯಾಕತ್, ಯೋಗೇಶ್ ಬಾಬು, ಕುಮಾರ, ಮೋಹನ್, ಶಿವ, ಷಣ್ಮುಖ, ಮುನಿಸ್ವಾಮಿ, ಜಯಪಾಲ್, ಸುಬ್ರಮಣಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment