ಮಾವಿನಕೆರೆ ಸರ್ಕಾರಿ ಶಾಲೆಗೆ ಶೇ.೧೦೦ರಷ್ಟು ಫಲಿತಾಂಶ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿರುವ ಭದ್ರಾವತಿ ತಾಲೂಕಿನ ಮಾವಿನಕೆರೆ ಸರ್ಕಾರಿ ಪ್ರೌಢಶಾಲೆ.
ಭದ್ರಾವತಿ, ಮೇ. ೧೯: ತಾಲೂಕಿನಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ೬೨೫ಕ್ಕೆ ೬೨೫ ಅಂಕಗಳನ್ನು ಪಡೆದುಕೊಂಡಿದ್ದು, ಈ ನಡುವೆ ಮಾವಿನಕೆರೆ ಸರ್ಕಾರಿ ಪ್ರೌಢಶಾಲೆ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಪ್ರತೀಕ್ಷಾ ದಯಾನಂದ (೬೨೫/೬೨೫)
ನಗರದ ಬಿ.ಎಚ್ ರಸ್ತೆ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಪ್ರತೀಕ್ಷಾ ದಯಾನಂದ ೬೨೫ಕ್ಕೆ ೫೨೫ ಅಂಕ ಹಾಗು ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಪ್ರೇರಣಾ .ಬಿ ೬೨೫ಕ್ಕೆ ೬೨೫ ಅಂಕಗಳನ್ನು ಪಡೆದುಕೊಂಡಿದ್ದಾರೆ.
ಉಳಿದಂತೆ ನ್ಯೂಟೌನ್ ಸೇಂಟ್ ಚಾರ್ಲ್ಸ್ ಶಾಲೆಯ ರಿತಿಕ್ ೬೨೪, ಹೊಸಮನೆ ಸೇಂಟ್ ಮೇರಿಸ್ ಶಾಲೆಯ ಆರ್. ಚೇತನ್ ೬೨೧, ಹೊಳೆಹೊನ್ನೂರು ಸೇಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿಗಳಾದ ಯಶಸ್ವಿನಿ .ಕೆ ೬೨೨ ಮತ್ತು ಪೂರ್ವಿಕ ೬೨೧ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ.
ಪ್ರೇರಣಾ ಬಿ (೬೨೫/೬೨೫)
ಒಟ್ಟಾರೆ ತಾಲೂಕಿನಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರ ತಿಳಿಸಿದ್ದಾರೆ.
ತನುಶ್ರೀ ೬೦೧/೬೨೫
ತಾಲೂಕಿನ ಮಾವಿನಕೆರೆ ಸರ್ಕಾರಿ ಪ್ರೌಢಶಾಲೆ ಈ ಬಾರಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ ೧೮ ವಿದ್ಯಾರ್ಥಿಗಳು ಸಹ ತೇರ್ಗಡೆಗೊಂಡಿದ್ದು, ಈ ಪೈಕಿ ತನುಶ್ರೀ ವಿದ್ಯಾರ್ಥಿನಿ ೬೨೫ಕ್ಕೆ ೬೦೧ ಅತಿ ಹೆಚ್ಚು ಅಂಕ ಪಡೆದಕೊಂಡಿದ್ದಾರೆ.
No comments:
Post a Comment