ಭದ್ರಾವತಿ, ಮೇ. ೨೦: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಸರ್ವ ಸದಸ್ಯರ ಸಭೆ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮೇ.೨೧ರಂದು ಸಂಜೆ ೫.೩೦ಕ್ಕೆ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಸನ್ಮಾನ ಹಾಗು ಬಹುಮಾನ ವಿತರಣೆ ನೆರವೇರಿಸಿಕೊಡಲಿದ್ದಾರೆ. ಸಂಘದ ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಉಪಾಧ್ಯಕ್ಷ ಆರ್. ಮೋಹನ್‌ಕುಮಾರ್, ಜಿಲ್ಲಾ ಕಾರ್ಯದರ್ಶಿ ಡಿ.ಟಿ ಕೃಷ್ಣಮೂರ್ತಿ, ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರಕುಮಾರ್ ದಯಾಮಾ, ಪ್ರಸೂತಿ ತಜ್ಞೆ ಡಾ. ವೀಣಾ ಭಟ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
No comments:
Post a Comment