ಭದ್ರಾವತಿ ತಾಲೂಕು ಕಚೇರಿ ರಸ್ತೆಯಲ್ಲಿರುವ ಕಂಚಿನ ಬಾಗಿಲು ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮಹಾರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ, ಮೇ. ೨೧: ನಗರದ ತಾಲೂಕು ಕಚೇರಿ ರಸ್ತೆಯಲ್ಲಿರುವ ಕಂಚಿನ ಬಾಗಿಲು ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮಹಾರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಮಹಾ ರಥೋತ್ಸವ ನಡೆಯಿತು. ರಥೋತ್ಸವ ದೇವಸ್ಥಾನದಿಂದ ಆರಂಭಗೊಂಡು ರಂಗಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಸ್ವಾಮಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ಭಜನಾ ತಂಡಗಳಿಂದ ಭಜನೆ, ಕೀರ್ತನೆಗಳು ಜರುಗಿದವು. ಭಕ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ ಹಾಗು ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.
ರಥೋತ್ಸವಕ್ಕೂ ಮೊದಲು ಬೆಳಿಗ್ಗೆ ನವಗ್ರಹ ಹೋಮ, ಅಧಿವಾಸ ಹೋಮ, ರಥ ಶುದ್ಧಿಹೋಮ, ರಥಾಧಿವಾಸ ಹೋಮ, ಶ್ರೀ ಸ್ವಾಮಿಯ ರಥಾರೋಹಣ, ಸಂಜೆ ಅಷ್ಟಾವಧಾನ ಸೇವೆ, ಶಯನೋತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನದ ಪ್ರಧಾನ ಅರ್ಚಕ ಪವನ್‌ಕುಮಾರ್ ಉಡುಪ ಧಾರ್ಮಿಕ ಆಚರಣೆಗಳ ನೇತೃತ್ವ ವಹಿಸಿದ್ದರು.
ಬಿ.ಕೆ ಸಂಗಮೇಶ್ವರ್, ತಹಶೀಲ್ದಾರ್ ಆರ್. ಪ್ರದೀಪ್, ನಗರಸಭಾ ಸದಸ್ಯರಾದ ಬಿ.ಟಿ ನಾಗರಾಜ್, ಆರ್. ಶ್ರೇಯಸ್, ಬಿ.ಎಂ. ಮಂಜುನಾಥ್, ಮಣಿ ಎಎನ್‌ಎಸ್, ಅನುಪಮ ಚನ್ನೇಶ್, ಪೌರಾಯುಕ್ತ ಮನುಕುಮಾರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ರಮಾಕಾಂತ್, ನರಸಿಂಹಚಾರ್, ದೇವಸ್ಥಾನ ಸಮಿತಿ ಅಧ್ಯಕ್ಷ ಕೆ. ನರಸಿಂಹಮೂರ್ತಿ, ಗೌರವಾಧ್ಯಕ್ಷ ಎಸ್.ಕೆ ಶಿವಲಿಂಗೇಗೌಡ, ಉಪಾಧ್ಯಕ್ಷ ಬಿ. ಅಪ್ಪಾಜಿ ಗೌಡ, ಪ್ರಧಾನ ಕಾರ್ಯದರ್ಶಿ ಎಸ್.ಎನ್ ರಾಜಶೇಖರ್, ಕಾರ್ಯದರ್ಶಿ ಎ.ಎಸ್ ಆಶಾ ಪುಟ್ಟಸ್ವಾಮಿ, ಖಜಾಂಚಿ ಎಸ್.ಬಿ ದುಗ್ಗೇಗೌಡ, ಶಿವೇಗೌಡ, ರತ್ನಮ್ಮ ಸುಭಾಷ್, ಎನ್. ಜವರೇಗೌಡ, ವೀಣಾ ಶ್ರೀನಿವಾಸ್, ಎಸ್.ಎಸ್ ಪ್ರಸನ್ನಕುಮಾರ್ ಮತ್ತು ಹೇಮಂತಕುಮಾರ್ ಸೇರಿದಂತೆ ಪದಾಧಿಕಾರಿಗಳು ಹಾಗು ಸಿದ್ದರೂಢನಗರ, ಹಳೇನಗರ, ಹನುಮಂತನಗರ, ಅಂಬೇಡ್ಕರ್ ನಗರ, ಭೂತನಗುಡಿ, ಕೇಶವಪುರ, ಹೊಸಮನೆ, ಹುತ್ತಾಕಾಲೋನಿ, ನ್ಯೂಕಾಲೋನಿ ವಿವಿಧೆಡೆಗಳಿಂದ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.
No comments:
Post a Comment