ಭಾರತೀಯ ಸೇನೆಯಲ್ಲಿ ಸುಮಾರು ೨೦ ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಭದ್ರಾವತಿಗೆ ಮರಳಿದ ವೀರ ಯೋಧ ಜಿ. ಮಂಜುನಾಥ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಭದ್ರಾವತಿ, ಮೇ. ೧: ಭಾರತೀಯ ಸೇನೆಯಲ್ಲಿ ಸುಮಾರು ೨೦ ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ತವರಿಗೆ ಮರಳಿದ ವೀರ ಯೋಧ ಜಿ. ಮಂಜುನಾಥ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಹೊಸಮನೆ ನಿವಾಸಿ ಜಿ. ಮಂಜುನಾಥ್‌ರವರು ಭಾರತೀಯ ಸೇನೆಯಲ್ಲಿ ಕರ್ತವ್ಯಕ್ಕೆ ಸೇರ್ಪಡೆಗೊಂಡು ಅಸ್ಸಾಂ, ಭೂಪಾಲ್, ಲಡಾಕ್ ಸೇರಿದಂತೆ ಹಲವೆಡೆ ಕರ್ತವ್ಯ ನಿರ್ವಹಿಸಿದ್ದಾರೆ. ನಿವೃತ್ತಿ ಕೊನೆಯ ಅವಧಿಯನ್ನು ಪಂಜಾಬ್‌ನಲ್ಲಿ ಪೂರೈಸಿ ಇದೀಗ ತವರಿಗೆ ಮರಳಿದ್ದಾರೆ.
ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಎಸ್. ರಾಜಶೇಖರ್ ನೇತೃತ್ವದಲ್ಲಿ ಬಜರಂಗದಳ ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಪುಷ್ಪ ಮಾಲಿಕೆಯೊಂದಿಗೆ ಪ್ರಮುಖ ರಸ್ತೆಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಅದ್ದೂರಿ ಸ್ವಾಗತ ಕೋರಿ ವೀರ ಯೋಧ ಜಿ. ಮಂಜುನಾಥ್‌ರವರ ದೇಶ ಪ್ರೇಮ, ಕರ್ತವ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
No comments:
Post a Comment