ಎಸ್. ವರದರಾಜ
ಭದ್ರಾವತಿ, ಮೇ. ೧೦: ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್. ವರದರಾಜಯವರು ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ.
'ಅರ್ಬನ್ ಹೌಸಿಂಗ್ ಸ್ಕೀಮ್ ಇನ್ ಕರ್ನಾಟಕ ವಿತ್ ಸ್ಪೆಷಲ್ ರೆಫರನ್ಸ್ ಟು ಶಿವಮೊಗ್ಗ ಡಿಸ್ಟ್ರಿಕ್ಟ್' ಮಹಾ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಲಭಿಸಿದ್ದು, ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮಾರ್ಗದರ್ಶಕರು ಮತ್ತು ಅಧ್ಯಕ್ಷರಾದ ಪ್ರೊ. ಎನ್.ಕೆ ಗೌಡ(ನಿವೃತ್ತ)ರವರ ಮಾರ್ಗದರ್ಶನದಲ್ಲಿ ಮಹಾ ಪ್ರಬಂಧ ಮಂಡಿಸಿದ್ದರು.
ವರದರಾಜರವರು ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕರಾದ ದಿವಂಗತ ಶಿವಲಿಂಗಯ್ಯ, ಲಕ್ಷ್ಮಮ್ಮ ದಂಪತಿ ಪುತ್ರರಾಗಿದ್ದು, ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ವಿವಿಧ ಸಂಘ-ಸಂಸ್ಥೆಗಳು ಅಭಿನಂದನೆ ಸಲ್ಲಿಸಿವೆ.
No comments:
Post a Comment