೪ನೇ ನ್ಯಾಷನಲ್ ಮಾಸ್ಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ಭದ್ರಾವತಿಯ ಹಿರಿಯ ಕ್ರೀಡಾಪಟು ಬಿ. ನಂಜೇಗೌಡರವರು ಭಾಗವಹಿಸಿ ತೃತೀಯ ಬಹುಮಾನ ಕಂಚಿನ ಪದಕ ಪಡೆದುಕೊಂಡಿದ್ದಾರೆ.
ಭದ್ರಾವತಿ, ಮೇ. ೨೩: ಮಾಸ್ಟರ್ ಗೇಮ್ಸ್ ಫೆಡರೇಷನ್(ಇಂಡಿಯಾ) ವತಿಯಿಂದ ಕೇರಳದ ತಿರುವನಂತಪುರಂನಲ್ಲಿ ಆಯೋಜಿಸಲಾಗಿದ್ದ ೪ನೇ ನ್ಯಾಷನಲ್ ಮಾಸ್ಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ನಗರದ ಹಿರಿಯ ಕ್ರೀಡಾಪಟು ಬಿ. ನಂಜೇಗೌಡರವರು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
೭೦ ವರ್ಷ ಮೇಲ್ಪಟ್ಟವರ ವಯೋಮಾನದ ವಿಭಾಗದಲ್ಲಿ ರಾಜ್ಯದಿಂದ ಪ್ರತಿನಿಧಿಸಿ ೩೦೦ ಮೀಟರ್ ಹರ್ಡಲ್ಸ್‌ನಲ್ಲಿ ತೃತೀಯ ಬಹುಮಾನದೊಂದಿಗೆ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ನಂಜೇಗೌಡರವರು ಮಾರ್ಚ್‌ನಲ್ಲಿ ಉಡುಪಿಯಲ್ಲಿ ನಡೆದ ೩ನೇ ನ್ಯಾಷನಲ್ ಮಾಸ್ಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ೨ ಚಿನ್ನ ಹಾಗು ೧ ಬೆಳ್ಳಿ ಪದಕ ಪಡೆದುಕೊಂಡಿದ್ದರು.
ಪೊಲೀಸ್ ಇಲಾಖೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ೭೫ರ ವಯೋಮಾನದ ನಂಜೇಗೌಡರವರು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು, ರಾಷ್ಟ್ರೀಯ, ಅಂತರಾಷ್ಟ್ರೀಯ, ರಾಜ್ಯ ಹಾಗು ಜಿಲ್ಲಾಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಇದುವರೆಗೂ ಸುಮಾರು ೩೧ಕ್ಕೂ ಹೆಚ್ಚು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಯುವ ಕ್ರೀಡಾಪಟುಗಳಿಗೆ ಮಾದರಿಯಾಗಿದ್ದಾರೆ. ಇವರ ಸಾಧನೆಗೆ ನಗರದ ಗಣ್ಯರು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.
No comments:
Post a Comment