ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್, ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಭಾನುವಾರ ಭದ್ರಾವತಿ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಮಿಕರ ದಿನಾಚರಣೆ ಹಾಗೂ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಮೇ. ೨೯: ಕಾರ್ಮಿಕರ ಶ್ರಮಕ್ಕೆ ಯಾರಿಂದಲೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಕಾರ್ಮಿಕರು ತಮ್ಮ ತಮ್ಮ ವೃತ್ತಿಗಳಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ತೊಡಗಿಸಿಕೊಳ್ಳುವ ಜೊತೆಗೆ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗು ಸಂಸ್ಕಾರ ನೀಡಬೇಕೆಂದು ಬಿಳಿಕಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್, ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಭಾನುವಾರ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಮಿಕರ ದಿನಾಚರಣೆ ಹಾಗೂ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಶ್ರೀಗಳು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಕಾರ್ಮಿಕರಿಲ್ಲದ ಸಮಾಜ ಕಲ್ಪಿಸಿಕೊಳ್ಳುವುದು ಅಸಾಧ್ಯವಾಗಿದ್ದು, ಪ್ರತಿಯೊಂದು ಕೆಲಸದ ಹಿಂದೆ ಕಾರ್ಮಿಕರ ಶ್ರಮವಿದೆ. ಕಾರ್ಮಿಕರು ಶ್ರಮ ಜೀವಿಗಳಾಗಿದ್ದು, ಧರ್ಮ, ಜಾತಿ, ಪಂಥಗಳನ್ನು ಮೀರಿದವರು. ಇವರನ್ನು ಒಂದಲ್ಲ ಒಂದು ರೀತಿಯಲ್ಲಿ ಪ್ರತಿಯೊಬ್ಬರು ಅವಲಂಬಿಸಿಕೊಂಡಿದ್ದಾರೆ. ಇಂತಹ ಕಾರ್ಮಿಕರ ಬದುಕು ಸಹ ಉತ್ತಮಗೊಳ್ಳಬೇಕು. ಇವರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕು. ಆಗ ಮಾತ್ರ ನಿಮ್ಮ ಶ್ರಮ ಸಾರ್ಥಕಗೊಳ್ಳುತ್ತದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಶ್ರಮಜೀವಿಗಳಾದ ಕಾರ್ಮಿಕರ ಸಂಕಷ್ಟಗಳಿಗೆ ಪೂರಕವಾಗಿ ಸ್ಪಂದಿಸುತ್ತಿವೆ. ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿವೆ. ಈ ಯೋಜನೆಗಳ ಕುರಿತು ಮಾಹಿತಿ ಹೊಂದುವ ಜೊತೆಗೆ ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ಕೆಎಸ್‌ಸಿಡಬ್ಲ್ಯೂಸಿಯು ತಾಲೂಕು ಅಧ್ಯಕ್ಷ ಕೆ. ಚಂದ್ರಶೇಖರ್, ಗೌರವಾಧ್ಯಕ್ಷ ಜಿ. ಸುರೇಶ್‌ಕುಮಾರ್, ಶಿವಮೊಗ್ಗ ಶಾಖೆಯ ಗೌರವ ಸಲಹೆಗಾರ ಎಂ. ಭೂಪಾಲ್, ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಗೌರವ ಸಲಹೆಗಾರ ಬಿ.ಕೆ ಶ್ರೀನಾಥ್, ಉದ್ಯಮಿ ಎ. ಮಾಧು, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ಸಂಜಯ್‌ಕುಮಾರ್, ಬಾಬು, ವಿಶ್ವನಾಥ್, ಸುಬ್ರಮಣಿ, ಲಕ್ಷ್ಮಣ್, ಸುಪ್ರಿಯ, ಎನ್. ಕುಮಾರ್, ಮನೋಹರ್, ಸುಂದರ್ ಬಾಬು, ಶಿವಣ್ಣಗೌಡ, ನಾಗೇಂದ್ರರೆಡ್ಡಿ, ಕೃಷ್ಣ, ವಿಜಯ್ ಸಿದ್ದಾರ್ಥ, ಕುಮಾರ್ ಹಾಗು ಶಿಕಾರಿಪುರ, ಶಿರಾಳಕೊಪ್ಪ, ಹೊಸನಗರ, ಆನವಟ್ಟಿ, ಸೊರಬ, ತಾಳಗೊಪ್ಪ, ಸಾಗರ, ತೀರ್ಥಹಳ್ಳಿ ಮತ್ತು ಹೊಳೆಹೊನ್ನೂರು ಹೋಬಳಿ ಶಾಖೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಎಸ್‌ಸಿಡಬ್ಲ್ಯೂಸಿಯು ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment