ಭದ್ರಾವತಿ ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕಾಯ್ದೆಯಡಿ ಶನಿವಾರ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘಿಸಿರುವವರ ವಿರುದ್ಧ ದಂಡ ವಿಧಿಸಲಾಯಿತು.
ಭದ್ರಾವತಿ, ಮೇ. ೭ : ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕಾಯ್ದೆಯಡಿ ಶನಿವಾರ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘಿಸಿರುವವರ ವಿರುದ್ಧ ದಂಡ ವಿಧಿಸಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ಹಳೇನಗರದ ಬಸವೇಶ್ವರ ವೃತ್ತ, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಒಟ್ಟು ೨೪೦೦ ರು. ದಂಡ ವಸೂಲಾತಿ ಮಾಡಲಾಯಿತು.
ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ ವಿ ಅಶೋಕ್, ಭದ್ರಾವತಿ, ಎಚ್.ಐ.ಓ ಅನಂದಮೂರ್ತಿ ಮೂರ್ತಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್ ರಾಜ್, ರವಿರಾಜ್ ಹಾಗೂ ನಗರ ಆರೋಗ್ಯ ಕೇಂದ್ರದ ಮನೋಹರ್ರ ಚೇತನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment