ಭದ್ರಾವತಿ ಹಳೆನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವ ಊರ ಹಬ್ಬದ ಅಂಗವಾಗಿ ಗುರುವಾರ ಬೆಳಗ್ಗೆ ಮಹಾ ಸಿಡಿ ಉತ್ಸವ ಅದ್ಧೂರಿಯಾಗಿ ಜರುಗಿತು.
ಭದ್ರಾವತಿ, ಮೇ. ೫ : ಹಳೆನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವ ಊರ ಹಬ್ಬದ ಅಂಗವಾಗಿ ಗುರುವಾರ ಬೆಳಗ್ಗೆ ಮಹಾ ಸಿಡಿ ಉತ್ಸವ ಅದ್ಧೂರಿಯಾಗಿ ಜರುಗಿತು.
ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ ಉತ್ಸವ ಮೆರವಣಿಗೆಯೊಂದಿಗೆ ಆಗಮಿಸಿದ ಶ್ರೀ ಹಳದಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಹಾ ಸಿಡಿ ಉತ್ಸವಕ್ಕೆ ಚಾಲನೆ ನೀಡಿದರು.
ಅಂಬೇಡ್ಕರ್ ನಗರದ ನಿವಾಸಿ ಲಿಂಗಪ್ಪ ಸಿಡಿ ಆಡುವ ಮೂಲಕ ಈ ಬಾರಿ ಗಮನ ಸೆಳೆದರು. ಪ್ರತಿ ೨ ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಸಿಡಿ ಉತ್ಸವ ಆಕರ್ಷಕ ಸಾಂಪ್ರದಾಯಕ ಆಚರಣೆಯಾಗಿದೆ. ಮಕ್ಕಳ ತೊಟ್ಟಿಲು ಸೇವೆ ಸಿಡಿ ಉತ್ಸವದಲ್ಲಿ ಮತ್ತೊಂದು ಆಕರ್ಷಣೆಯಾಗಿದೆ.
ಸಿಡಿ ಉತ್ಸವ ವೀಕ್ಷಣೆಗೆ ನಗರದ ವಿವಿಧೆಡೆಗಳಿಂದ ಭಕ್ತಾಧಿಗಳು ಆಗಮಿಸಿದ್ದರು. ಗಣ್ಯರು, ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸೇವಾಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶ್ರೀ ಪಿಳ್ಳಂಗಿ ಮಾರಿಯಮ್ಮ ಸೇವಾ ಸಮಿತಿ ವತಿಯಿಂದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
No comments:
Post a Comment